ಎಫ್‌ಡಿಐ ವಿರೋಧಿಸಿ 20ರಂದು ಹುಬ್ಬಳ್ಳಿಯಲ್ಲಿ ರ‌್ಯಾಲಿ

7

ಎಫ್‌ಡಿಐ ವಿರೋಧಿಸಿ 20ರಂದು ಹುಬ್ಬಳ್ಳಿಯಲ್ಲಿ ರ‌್ಯಾಲಿ

Published:
Updated:

ಬೆಂಗಳೂರು: ಬಹುಬ್ರಾಂಡ್ ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಿರುವ ಕೇಂದ್ರದ ಕ್ರಮವನ್ನು ಖಂಡಿಸಿ ಇದೇ 20ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.ಪಕ್ಷದ ಯುವ ಘಟಕ ಪ್ರತಿಭಟನೆಯ ನೇತೃತ್ವ ವಹಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಹ್ಲಾದ ಜೋಶಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಬಳಕೆಗೆ ನಿರ್ಬಂಧ ವಿಧಿಸಿರುವುದರ ವಿರುದ್ಧ ಪಕ್ಷದ ಮಹಿಳಾ ಘಟಕಗಳು ಇದೇ 12ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry