ಶನಿವಾರ, ಜನವರಿ 18, 2020
21 °C

ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ 2006ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಬುಧವಾರ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಬಳಿಯಿಂದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ನೇತೃತ್ವದಲ್ಲಿ ಮೆರವಣಿಗೆ ಆರಂಭಿಸಿದ ನೂರಾರು ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಪಟ್ಟಣದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಹತ್ತು ನಿಮಿಷಗಳಿಗೂ ಹೆಚ್ಚು ಸಮಯ ರಸ್ತೆತಡೆ ನಡೆಸಿದರು. ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ರಥಬೀದಿಯ ಮೂಲಕ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ನಾಡಕಚೇರಿಗೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಸಮಯ ಕಚೇರಿ ಎದುರು ಧರಣಿ ನಡೆಸಿದರು. ನಂತರ ಉಪತಹಶೀಲ್ದಾರ್‌ ಚಂದ್ರಶೇಖರಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.2006ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಮುಖಂಡ ನವನೀತ ಮಾತನಾಡಿ ಇದುವರೆಗೆ ಖಾಸಗಿ ಕಾಲೇಜುಗಳಲ್ಲಿಯೂ ಶೇ 40ರಷ್ಟು ಸೀಟುಗಳು ಲಭ್ಯವಾಗುತ್ತಿದ್ದರಿಂದ ಸಾಕಷ್ಟು ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕಲಿಯಲು ಸಾಧ್ಯವಾಗುತ್ತಿತ್ತು.ಆದರೆ ಸರ್ಕಾರವು ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಶ್ರೀಮಂತರ ಮಕ್ಕಳಿಗೆ ಮಾತ್ರ ವೃತ್ತಿಪರ ಕೋರ್ಸ್‌ಗಳು ಎಂಬಂತೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮೀನಾರಾಯಣ ಸೇರಿದಂತೆ ಇತರ ವಿದ್ಯಾರ್ಥಿ ಮುಖಂಡರು ಹಾಜರಿದ್ದರು.

ಪ್ರತಿಕ್ರಿಯಿಸಿ (+)