ಎರಡನೇ ಅವಧಿಗೆ ಅವಿರೋಧ ಆಯ್ಕೆ

7

ಎರಡನೇ ಅವಧಿಗೆ ಅವಿರೋಧ ಆಯ್ಕೆ

Published:
Updated:

ಮಹದೇವಪುರ: ಕ್ಷೇತ್ರದ ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚಿಕ್ಕನಾಯಕನಹಳ್ಳಿಯ ಮದ್ದೂರಮ್ಮ ಹಾಗೂ ಉಪಾಧ್ಯಕ್ಷರಾಗಿ ಹಾಡೋಸಿದ್ದಾಪುರದ ಚಂದ್ರಪ್ಪ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಪುರುಷ ಅಭ್ಯರ್ಥಿಗಳಿಗೆ ಮೀಸಲಾತಿ ಇತ್ತು. ಬೆಂಗಳೂರು ಪೂರ್ವ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಿಪ್ಪೆಸ್ವಾಮಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷರನ್ನು ಮತ್ತು ಉಪಾಧ್ಯಕ್ಷರನ್ನು ಸ್ಥಳೀಯ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ಜಯಚಂದ್ರ ಹೂವಿನಹಾರ ಹಾಕಿ ಅಭಿನಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry