ಶನಿವಾರ, ಮೇ 15, 2021
24 °C

ಎರಡನೇ ರಾಜಧಾನಿಗೆ ಆಗ್ರಹಿಸಿ ಸಹಿ ಸಂಗ್ರಹಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ರಾಜ್ಯದ ಎರಡನೇ ರಾಜಧಾನಿಯನ್ನಾಗಿ ದಾವಣಗೆರೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಎರಡನೇ ರಾಜಧಾನಿ ಹೋರಾಟ ಸಮಿತಿ ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂದೆ ಭಾನುವಾರ ಎರಡನೇ ಹಂತದ ಸಹಿ ಸಂಗ್ರಹ ಕಾರ್ಯಕ್ರಮ ನಡೆಸಿದರು.ದಾವಣಗೆರೆ ನಗರವು ಭೌಗೋಳಿಕವಾಗಿ ರಾಜ್ಯದ ಕೇಂದ್ರಭಾಗದಲ್ಲಿದೆ. ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿ-4 ಹಾದು ಹೋಗಿದ್ದು, ಸಾರಿಗೆ ವ್ಯವಸ್ಥೆ ಉತ್ತಮವಾಗಿದೆ. 2ನೇ ರಾಜಧಾನಿ ಆಗಲು ಎಲ್ಲ ಅರ್ಹತೆ ಹೊಂದಿದೆ ಎಂದರು.ದಾವಣಗೆರೆಯು 1947-48ರಲ್ಲಿ ರಾಜಧಾನಿ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ, ಗಾಂಜಿವೀರಪ್ಪ, ಕಾಸಲ್ ಶ್ರೀನಿವಾಸ ಶೆಟ್ಟಿ, ಎಚ್. ಸಿದ್ದವೀರಪ್ಪ ಮುಂತಾದವರು ಹೋರಾಟ ನಡೆಸಿದರೂ ಸಹ ಈಡೇರಲಿಲ್ಲ. ಈಗಾಗಲೇ, ಮಹಾರಾಷ್ಟ್ರದಲ್ಲಿ ನಾಗಪುರ ನಗರವು 2ನೇ ರಾಜಧಾನಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಂತೆ ದಾವಣಗೆರೆಯನ್ನು 2ನೇ ರಾಜಧಾನಿಯಾಗಿ ಘೋಷಿಸಿ, ಆಡಳಿತ ವಿಕೇಂದ್ರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.ದಾವಣಗೆರೆ ಜನತೆ ತೆಲಂಗಾಣ, ಉತ್ತರಪ್ರದೇಶದಂತೆ ಪ್ರತ್ಯೇಕ ರಾಜ್ಯ ಆಗಬೇಕು ಎಂದು ಕೇಳುತ್ತಿಲ್ಲ. ದಾವಣಗೆರೆ 2ನೇ ರಾಜಧಾನಿಯಾಗಿ ಮತ್ತು ಪ್ರತಿವರ್ಷ ಒಂದು ಅಧಿವೇಶನ ನಡೆದರೆ ದಾವಣಗೆರೆ ಸೇರಿದಂತೆ ಸುತ್ತಲಿನ ಜಿಲ್ಲೆಗಳು ಅಭಿವೃದ್ಧಿಯಾಗುತ್ತವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.