ಎರಡು ಅಪಘಾತ:16 ಮಂದಿ ಸಾವು

ಬುಧವಾರ, ಮೇ 22, 2019
32 °C

ಎರಡು ಅಪಘಾತ:16 ಮಂದಿ ಸಾವು

Published:
Updated:

ಚೆನ್ನೈ:ತಮಿಳುನಾಡಿನಲ್ಲಿ ಸೋಮವಾರ ಎರಡು ಪ್ರತ್ಯೇಕ ಅಪಘಾತಗಳಲ್ಲಿ 16 ಜನ ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದ ಸ್ಲೀಪರ್ ಕೋಚ್ ಬಸ್ ಕೂಡ ಸೇರಿದೆ ಎಂದು ಪೊಲೀಸರು ಹೇಳಿದ್ದಾರೆ.ಸೋಮವಾರ ನಸುಕಿನಲ್ಲಿ ಕೊಯಮತ್ತೂರು ಬೈಪಾಸ್ ರಸ್ತೆಯಲ್ಲಿ ಕೇರಳ ಮೂಲದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಕೊಟ್ಟಾಯಂ- ಬೆಂಗಳೂರು ಬಸ್ಸಿಗೆ ಡಿಕ್ಕಿ ಹೊಡೆಯಿತು. ಈ ಸಂದರ್ಭದಲ್ಲಿ ಬಸ್ಸಿನ ಡೀಸೆಲ್ ಟ್ಯಾಂಕ್ ಸ್ಫೋಟಿಸಿ ಬೆಂಕಿ ಹೊತ್ತಿಕೊಂಡಿತು.

 

ಬೆಂಕಿಯ ಜ್ವಾಲೆ ಲಾರಿಯನ್ನೂ ಸುತ್ತುವರಿದು ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಸ್ಸಿನಲ್ಲಿದ್ದ 45 ಜನರ ಪೈಕಿ 17 ಮಂದಿ ಗಾಯಗೊಂಡರು ಎಂದು ಮೂಲಗಳು ಹೇಳಿವೆ. ಮತ್ತೊಂದು ಪ್ರಕರಣದಲ್ಲಿ ಮನಪರೈನಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry