ಮಂಗಳವಾರ, ಜೂನ್ 15, 2021
21 °C

ಎರಡು ಕನಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ಎರಡು ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅವುಗಳಲ್ಲಿ ನಟ ಉಪೇಂದ್ರ ಕಥೆ, ಚಿತ್ರಕಥೆ ಬರೆದಿರುವ `ಟೋಪಿವಾಲ~ ಒಂದು. ಚಿತ್ರದ ಚಿತ್ರೀಕರಣ ಇದೇ ತಿಂಗಳ ಹನ್ನೆರಡರಿಂದ ಆರಂಭವಾಗಲಿದೆ. ಪಿ.ವಾಸು ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅಭಿನಯಿಸುತ್ತಿರುವ ಇನ್ನೊಂದು ಚಿತ್ರಕ್ಕೆ ಜೂನ್‌ನಲ್ಲಿ ಚಿತ್ರೀಕರಣ ನಡೆಯಲಿದೆ.ಆರು ವರ್ಷಗಳಿಂದ ಪುನೀತ್‌ಗಾಗಿ ಕಾದಿದ್ದ ಕನಕಪುರ ಶ್ರೀನಿವಾಸ್ ಅವರಿಗೆ ಈಗ ಕಾಲ್‌ಷೀಟ್ ದೊರಕಿರುವುದು ಸಂತಸ ತಂದಿದೆ. ಅವರ `ಮಯೂರ~ ಚಿತ್ರದಲ್ಲಿ ಪುನೀತ್ ಅಭಿನಯಿಸಬೇಕಿತ್ತು. ನಿರ್ದೇಶಕ ಶೋಭನ್ ಅವರ ಅಕಾಲಿಕ ಮರಣದಿಂದಾಗಿ ಈ ಚಿತ್ರ ಸ್ಥಗಿತಗೊಂಡಿತ್ತು. ಅಲ್ಲಿಂದ ಒಳ್ಳೆಯ ಕಥೆಗಾಗಿ ಹುಡುಕುತ್ತಿದ್ದ ನಿರ್ಮಾಪಕರಿಗೆ ಈಗ ಕಾಲ ಕೂಡಿ ಬಂದಿದೆ.  ಉಪೇಂದ್ರ ಅಭಿನಯದ `ಟೋಪಿವಾಲ~  ಚಿತ್ರವನ್ನು ಶ್ರೀನಿವಾಸ್(ಶ್ರೀನಿ) ನಿರ್ದೇಶಿಸುತ್ತಿದ್ದಾರೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಇವರಿಗೆ ರೇಡಿಯೋ ಜಾಕಿಯಾಗಿ ಕಾರ್ಯ ನಿರ್ವಹಿಸಿರುವ ಅನುಭವವೂ ಇದೆ.  ಹಿರಿತೆರೆಯಲ್ಲಿ ಇದು ಚೊಚ್ಚಿಲ ಯತ್ನ. ಚಿತ್ರಕ್ಕೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.