ಭಾನುವಾರ, ಮೇ 9, 2021
19 °C

ಎರಡು ತಲೆ ಹಾವು ಮಾರಾಟ : ಇಬ್ಬರ ಬಂಧನ, ಹಾವು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ಎರಡು ತಲೆ ಹಾವು ಎಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರು ಅರಣ್ಯ ಘಟಕದ ಸಿ.ಐ.ಡಿ ಪೋಲೀಸರು ಪಟ್ಟಣದ ಹೇಮಾವತಿ ಕಚೇರಿ ಮುಂಭಾಗ ಮಂಗಳವಾರ ತಡ ರಾತ್ರಿ ಬಂಧಿಸಿದ್ದಾರೆ.ಬಂಧಿತರನ್ನು ತಾಲ್ಲೂಕಿನ ಶಿಕಾರಿಪುರದ ನವರಂಗ್ (32) ಹಾಗೂ ಗುರುರಾಜ್ (32) ಎಂದು ಗುರುತಿಸಲಾಗಿದೆ. ಇವರಿಂದ ಮಣ್ಣುಮುಕ್ಕ ಹಾವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೈ ಚೀಲದಲ್ಲಿಟ್ಟುಕೊಂಡು ಎರಡು ತಲೆ ಹಾವು ಎಂದು ಮಾರಾಟ ಮಾಡುವಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ ವಿಚಾರಣೆ ನಡೆಸಿದ ನಂತರ ಬುಧವಾರ ಬೆಳಗ್ಗೆ ನಾಗಮಂಗಲ ವಲಯ ಅರಣ್ಯ ಅಧಿಕಾರಿಗಳಿಗೆ ಬಂಧಿತರನ್ನು ಒಪ್ಪಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ತನಿಖೆಯಲ್ಲಿ ಬೆಂಗಳೂರು ಅರಣ್ಯ ಘಟಕದ ಸಿ.ಐ.ಡಿ ರಾಜೇಶ್, ಆರ್.ಎಫ್.ಓ ರಮೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.