ಗುರುವಾರ , ಮೇ 13, 2021
38 °C

ಎರಡು ತಿಂಗಳಲ್ಲಿ ಕಾಮಗಾರಿ ಪೂರೈಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಸ್ತೂರ ಬಾ ರಸ್ತೆಯ ಕಾಮಗಾರಿಯನ್ನು ಉಪಲೋಕಾಯುಕ್ತ ಎಸ್.ಬಿ.ಮಜಗೆ ಅವರು ಸೋಮವಾರ ಪರಿಶೀಲಿಸಿ, ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.ಕಸ್ತೂರ ಬಾ ರಸ್ತೆ ಮತ್ತು ಪಾದಚಾರಿ ಮಾರ್ಗದ ಅವ್ಯವಸ್ಥೆ ಕುರಿತು `ಪ್ರಜಾವಾಣಿ'ಯಲ್ಲಿ ಸೋಮವಾರ ವಿಶೇಷ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಚರ್ಚಿಸಿದ ಅವರು, ಪ್ರತಿ ವಾರದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.ಲೋಕಾಯುಕ್ತ ಮುಖ್ಯ ಎಂಜಿನಿಯರ್ ಪಿ.ಆರ್.ಅನಿಲ್‌ಕುಮಾರ್ ಮಾತನಾಡಿ, `ಪ್ರಜಾವಾಣಿ' ವರದಿನೋಡಿ ಜನರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ಉಪಲೋಕಾಯುಕ್ತ ಎಸ್.ಬಿ.ಮಜಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಸಮನ್ವಯದ ಕೊರತೆಯಿಂದ ಕಾಮಗಾರಿ ತಡವಾಗಿರುವುದು ಕಂಡುಬಂದಿದೆ. ಮುಂದಿನ ಆಗಸ್ಟ್ ತಿಂಗಳ ಕೊನೆಯವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶಿದ್ದಾರೆ' ಎಂದರು.`ಪಾದಚಾರಿ ಮಾರ್ಗ ಮತ್ತು ರಸ್ತೆ ಅವ್ಯವಸ್ಥೆಯಿಂದ ಜನರು ಪರದಾಡುವಂತಾಗಿದೆ. ಮಳೆ ನೀರು ನಿಂತರೂ ಹರಿದು ಹೋಗಲು ಅಲ್ಲಿ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಇದರಿಂದ ಇದನ್ನು ಸರಿಪಡಿಸುವಂತೆ ಹೇಳಲಾಗಿದೆ' ಎಂದರು.ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಬಸವರಾಜ ಕಬಾಡೆ, `ಕಸ್ತೂರ ಬಾ ರಸ್ತೆಯ ಒಳಚರಂಡಿ ಮಾರ್ಗಗಳು  ಸುಮಾರು 40-50 ವರ್ಷಗಳಷ್ಟು ಹಳೆಯವು. ಇದರಿಂದ, ಅವುಗಳಿಗೆ ಸೂಕ್ತ ವ್ಯವಸ್ಥೆ ಮಾಡಿ ನಂತರ ಕಾಮಗಾರಿ ಕೈಗೊಳ್ಳಬೇಕು. ಅಲ್ಲದೆ, ಇಲ್ಲಿಯೇ ದೂರವಾಣಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಲೇನ್‌ಗಳು ಇವೆ. ಇವುಗಳಿಗೆ ಹಾನಿಯಾಗದಂತೆ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ' ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.