ಬುಧವಾರ, ನವೆಂಬರ್ 20, 2019
27 °C
ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿಕೆ

ಎರಡು ದಿನದಲ್ಲಿ ಬಿಜೆಪಿ 3ನೇ ಪಟ್ಟಿ ಬಿಡುಗಡೆ

Published:
Updated:

ಬೆಳಗಾವಿ: `ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ಶುಕ್ರವಾರ ಬೆಂಗಳೂರಿಗೆ ತೆರಳಲು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಇದನ್ನು ತಿಳಿಸಿದರು.ನಾನು ಸ್ವಕ್ಷೇತ್ರವಾದ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದು, ಇದೇ 17 ರಂದು ನಾಮಪತ್ರ ಸಲ್ಲಿಸುವೆ ಎಂದರು.ಕಾಂಗ್ರೆಸ್‌ಗೆ ಸೇರ್ಪಡೆ

ರಾಯಚೂರು ವರದಿ: ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ. ಪಾಪಾರೆಡ್ಡಿ ಅವರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಶುಕ್ರವಾರ ಸೇರಿದರು.ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದ ಪಾಪಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ.  ತ್ರಿವಿಕ್ರಮ ಜೋಶಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದರಿಂದ ಅಸಮಾಧಾನಗೊಂಡ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು.

ಪ್ರತಿಕ್ರಿಯಿಸಿ (+)