ಎಲ್ಲಕ್ಕೂ ಉತ್ತರಿಸುವೆ: ಲೋಕಾಯುಕ್ತ

ಗುರುವಾರ , ಮೇ 23, 2019
30 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಎಲ್ಲಕ್ಕೂ ಉತ್ತರಿಸುವೆ: ಲೋಕಾಯುಕ್ತ

Published:
Updated:

ಬೆಂಗಳೂರು: ಗೃಹ ನಿರ್ಮಾಣ ಸಹಕಾರ ಸಂಘಗಳ ಉಪನಿಯಮ (ಬೈಲಾ) ಉಲ್ಲಂಘಿಸಿ ನಿವೇಶನಗಳನ್ನು ಪಡೆದಿರುವ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಲು ತೀರ್ಮಾನಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ರಾಜೀನಾಮೆ ನೀಡುವ ಸಾಧ್ಯತೆ ಕುರಿತ ವದಂತಿಯನ್ನು ತಳ್ಳಿ ಹಾಕಿದ್ದಾರೆ.ಈ ಕುರಿತು `ಪ್ರಜಾವಾಣಿ~ ಜೊತೆ ಮಾತನಾಡಿದ ಅವರು, `ನಾನು ಇಷ್ಟು ದಿನಗಳ ಕಾಲ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸದಲ್ಲಿದ್ದೆ. ಈ ಕಾರಣದಿಂದಾಗಿ ವಿವಾದದ ಕುರಿತು ಪ್ರತಿಕ್ರಿಯಿಸಲು ಸಾಧ್ಯವಾಗಿರಲಿಲ್ಲ. ವಿವಾದದ ಬಗ್ಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಪ್ರತಿಕ್ರಿಯೆ ನೀಡುತ್ತೇನೆ~ ಎಂದರು.ಪಾಟೀಲ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವದಂತಿ ಭಾನುವಾರ ದಟ್ಟವಾಗಿ ಹಬ್ಬಿತ್ತು.ಈ ಬಗ್ಗೆ ಅವರನ್ನು ಪ್ರಶ್ನಿಸಿದಾಗ, `ರಾಜೀನಾಮೆ ನೀಡುವಂತಹ ನಿರ್ಧಾರದ ಬಗ್ಗೆ ನಾನು ಯೋಚಿಸಿಯೇ ಇಲ್ಲ. ಈ ಬಗ್ಗೆ ಮಾಧ್ಯಮಗಳು ಪ್ರವಾಸದಲ್ಲಿದ್ದಾಗಲೇ ಪ್ರಶ್ನಿಸಿದ್ದವು. ಎಲ್ಲರಿಗೂ ಸೋಮವಾರ ಉತ್ತರಿಸುವುದಾಗಿ ತಿಳಿಸಿದ್ದೇನೆ~ ಎಂದು ಪ್ರತಿಕ್ರಿಯಿಸಿದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry