ಸೋಮವಾರ, ಮಾರ್ಚ್ 8, 2021
24 °C

ಎಲ್ಲಾ ಜಾತಿಯ ಶೋಷಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಲ್ಲಾ ಜಾತಿಯ ಶೋಷಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ

ಯಲಹಂಕ: ಎಲ್ಲಾ ಜಾತಿಯ ಶೋಷಿತ­ರಿಗೆ ವಸತಿ ಸೌಲಭ್ಯ ಕಲ್ಪಿಸುವುದೂ ಸೇರಿ­ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಪ್ರಜಾ ವಿಮೋಚನಾ ಚಳವಳಿ (ಸಮತಾವಾದ) ಬೆಂಗಳೂರು ಉತ್ತರ ತಾಲ್ಲೂಕು ಶಾಖೆಯ ಕಾರ್ಯ­ಕರ್ತರು ತಹಶೀಲ್ದಾರ ಕಚೇರಿ ಮುಂಭಾ­ಗದಲ್ಲಿ ಪ್ರತಿಭಟನೆ ನಡೆಸಿದರು.ಕೋಗಿಲು ವೃತ್ತದಿಂದ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ ಕಚೇರಿ ಮುಂಭಾಗಕ್ಕೆ ಆಗಮಿಸಿ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ  ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಮಾತನಾಡಿದರು. ಚಳವಳಿಯ ರಾಜ್ಯ ಪ್ರಧಾನ ಕಾರ್ಯ­ದರ್ಶಿ ಮುನಿ­ಆಂಜಿನಪ್ಪ ಮಾತನಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಬೆಂಗಳೂರು ಉತ್ತರ ಉಪ ವಿಭಾಗಾ­ಧಿ­ಕಾರಿ ಮಹೇಶ್‌ಕುಮಾರ್‌, ಇದೇ 22ರಂದು ಸಂಘಟನೆಯ ಮುಖಂಡರನ್ನು ಆಹ್ವಾನಿಸಿ, ಚರ್ಚೆ ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು. 

ಬೆಂಗಳೂರು ವಿಭಾಗೀಯ ಶಾಖೆಯ ಅಧ್ಯಕ್ಷ ಇಂಡ್ಲವಾಡಿ ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಲ್‌. ಶಂಕರ್‌, ಮುಖಂಡರಾದ ಮುನಿಕೃಷ್ಣ, ಅಯೂಬ್‌ ಖಾನ್‌, ಕೆ.ಎಸ್‌.ಸ್ವಾಮಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.