ಭಾನುವಾರ, ಜೂನ್ 13, 2021
24 °C

ಎಲ್ಲ ಗ್ರಾಮಗಳಲ್ಲೂ ಸ್ತ್ರೀಶಕ್ತಿ ಭವನ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಆದ್ಯತೆಯ ಮೇರೆಗೆ ಸ್ತ್ರೀಶಕ್ತಿ ಭವನ ನಿರ್ಮಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ಹೇಳಿದರು.ಇಲ್ಲಿನ ಅಶೋಕ ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಹಾಗೂ ಪಂಚಾಯ್ತಿ ಮಹಿಳಾ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಸ್ತ್ರೀಶಕ್ತಿ ಸಂಘಗಳು ಸದಾ ಚಟುವಟಿಕೆಯಿಂದ ಕೂಡಿರಬೇಕು. ಸರ್ಕಾರದ ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಸಲಹೆ ಮಾಡಿದರು.ಸ್ತ್ರೀ ಶಕ್ತಿ  ಹಾಗೂ ಮಹಿಳಾ ಸಂಘಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಮಹಿಳೆಯರ ಸಬಲೀಕರಣ ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ದ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಶೇಖರ್ ಹೇಳಿದರು.ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪವಿತ್ರಮ್ಮ ಮರಿದಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ. ಸದಸ್ಯರಾದ ಡಿ. ಪರಶುರಾಮಪ್ಪ, ಅನಿತಾ ಬಸವರಾಜು, ಎಂ. ಲಕ್ಷ್ಮಣ್, ಆರ್ ಹನುಮಂತಪ್ಪ, ಸಿಡಿಪಿಒ ಈಶ್ವರಪ್ಪ, ಪುರಸಭೆ ಸದಸ್ಯರು, ತಾ.ಪಂ. ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಉತ್ತಮ ಆರ್ಥಿಕ ನಿರ್ವಹಣೆ ಜತೆಗೆ ಅಧಿಕ ಉಳಿತಾಯ ಮಾಡಿದ ತಾಲ್ಲೂಕಿನ 8 ಸ್ತ್ರೀಶಕ್ತಿ ಸಂಘಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಇದಲ್ಲದೆ ಭಾಗ್ಯಲಕ್ಷ್ಮೀ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬಾಂಡ್ ವಿತರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.