ಸೋಮವಾರ, ಜೂನ್ 14, 2021
27 °C

ಎಲ್ಲ ಗ್ರಾಮದಲ್ಲೂ ಗ್ರಾಹಕ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಗ್ರಾಹಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲೂ ಗ್ರಾಹಕ ಅದಾಲತ್ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆಕೈಗೊಳ್ಳಬೇಕು~ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಗ್ರಾಹಕ ರಕ್ಷಣಾ ಪರಿಷತ್‌ನ ಪ್ರಥಮ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಗ್ರಾಹಕರ ಅದಾಲತ್ ಕಾರ್ಯಕ್ರಮ ಗಳನ್ನು ಜನಸ್ಪಂದನ ಸಭೆಯೊಂದಿಗೆ ನಡೆಸಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಗ್ರಾಹಕರ ರಕ್ಷಣೆ, ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಹೀಗಾಗಿ, ಗ್ರಾಹಕರಿಗೆ ಪ್ರತ್ಯೇಕ ಅದಾಲತ್ ನಡೆಸಬೇಕು ಎಂದರು.ಗ್ರಾಹಕರ ಶೋಷಣೆ ತಪ್ಪಿಸಿ ಗುಣ ಮಟ್ಟದ ವಸ್ತುಸೇವೆ ಒದಗಿಸಬೇಕು. ಗುಣಮಟ್ಟದ ವಸ್ತು ಶುದ್ಧತೆ, ನಿಗದಿತ ದರ, ತೂಕ- ಅಳತೆಯಲ್ಲಿ ವ್ಯತ್ಯಾಸವಾಗದಂತೆ ನೋಡಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಹಕರನ್ನು ಜಾಗೃತಿಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.ಪ್ರತಿ ಶಾಲೆಯಲ್ಲೂ 50 ವಿದ್ಯಾರ್ಥಿಗಳನ್ನು ಒಳಗೊಂಡ ಗ್ರಾಹಕ ಕ್ಲಬ್ ರಚಿಸಬೇಕು. ಈ ಸಂಬಂಧ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಶೀಘ್ರವೇ ಸಭೆ ಕರೆಯಬೇಕು. ಗ್ರಾಹಕ  ಕ್ಲಬ್‌ನ ಕಾರ್ಯ ನಿರ್ವಹಣೆ, ಪ್ರಗತಿಯ ಪರಾಮರ್ಶೆ ನಡೆಸಬೇಕು ಎಂದರು.ಮಾ. 15ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಪರಿಷತ್‌ನ ನಾಮನಿರ್ದೇಶಿತ ಸದಸ್ಯ ಕೆ.ವಿ. ಸರ್ವೇಶ್, ಬಸವರಾಜು, ಸಣ್ಣ ಮಾದೇಗೌಡ, ಸ್ವಾಮಿ ವಿವೇಕಾನಂದ ಟ್ರಸ್ಟ್ ಅಧ್ಯಕ್ಷ ಜಿ. ಮಲ್ಲೆೀಶಪ್ಪ, ಸಿ. ಶಿವಕುಮಾರ್, ಮೈರಾಡ ಸಂಸ್ಥೆಯ ಯೋಜನಾಧಿಕಾರಿ ರಾಜಚಾರ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಡಾ.ಎಸ್.ಇ. ಮಹದೇವಪ್ಪ, ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು ಇತರರು ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.