ಉಡುಪಿ: ಮಾಹಿತಿಯ ಕೊರತೆಯಿಂದಾಗಿ ಅಂಗವಿಕಲರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಅಂಗವಿಕಲರ ಸಹಾಯವಾಣಿ ಕೇಂದ್ರ ಆರಂಭಿಸಲು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ಧರಿಸಿದೆ.

ಸಹಾಯವಾಣಿ ಕೇಂದ್ರ ಆರಂಭಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗೆ ₹7.15 ಲಕ್ಷ ಅನುದಾನ ನಿಗದಿ ಮಾಡಲಾಗಿದೆ. ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಇಬ್ಬರು ಪದವೀಧರರನ್ನು ಸಲಹೆಗಾರರನ್ನಾಗಿ ನೇಮಕ ಮಾಡಲಾಗುತ್ತದೆ.

ಇವರಿಗೆ ವಿಶೇಷ ತರಬೇತಿಯನ್ನೂ ನೀಡಲಾಗುತ್ತದೆ. ಕಂಪ್ಯೂಟರ್ ಆಪರೇಟರ್ಗಳು ಹಾಗೂ ‘ಡಿ’ ದರ್ಜೆ ನೌಕರರನ್ನೂ ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ಸೌಲಭ್ಯಗಳ ಮಾಹಿತಿ ಹಾಗೂ ಸಲಹೆಗಳನ್ನು ಅಂಗವಿಕಲರು ಈ ಕೇಂದ್ರದಿಂದ ಪಡೆದುಕೊಳ್ಳಬಹುದು.

2011ರ ಜನಗಣತಿಯ ರಾಜ್ಯದಲ್ಲಿ ಒಟ್ಟು 13,24,205 ಮಂದಿ ಅಂಗವಿಕಲರಿದ್ದು, ಇವರಲ್ಲಿ ಶೇ 70ರಷ್ಟು ಮಂದಿ ಗ್ರಾಮೀಣ ಪ್ರದೇಶಗಳಲ್ಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯ ಮೂಲಕ ಇಲಾಖೆಯ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಆದರೆ ಇಲಾಖೆಯ ಯೋಜನೆಗಳ ಅರಿವು ಇಲ್ಲದ, ಮಾಹಿತಿ ಇದ್ದರೂ ಅದರ ಲಾಭ ಪಡೆಯುವ ವಿಧಾನದ ಗೊತ್ತಿಲ್ಲದವರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸಣ್ಣ ಮಾಹಿತಿ ಪಡೆಯಲು ಸಹ ಅವರು ಇಲಾಖೆಯ ನಿರ್ದೇಶನಾಲಯವನ್ನು ಸಂಪರ್ಕಿಸುತ್ತಿದ್ದಾರೆ.

ಶೈಕ್ಷಣಿಕ ಸೌಲಭ್ಯ, ವೃತ್ತಿ ತರಬೇತಿ, ಉದ್ಯೋಗ ಮಾಹಿತಿ, ಸಾಮಾಜಿಕ ಭದ್ರತೆ ಯೋಜನೆಗಳ ಬಗ್ಗೆ ಬೆಂಗಳೂರಿನ ಕಚೇರಿಯಿಂದ ವಿವರ ಕೇಳುತ್ತಿದ್ದಾರೆ. ಅಲ್ಲದೆ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಅವರಿಗೂ ಮನವಿ ನೀಡುತ್ತಿರುವುದನ್ನು ಮನಗಂಡಿರುವ ಇಲಾಖೆ ಸಹಾಯವಾಣಿ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಅಂಗವಿಕಲರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಲ್ಲಿಯೇ ಸಹಾಯವಾಣಿ ಕೇಂದ್ರ ಆರಂಭಿಸಲು ಸೂಚಿಸಲಾಗಿದೆ. ಸ್ಥಳಾವಕಾಶ ಲಭ್ಯ ಇಲ್ಲದಿದ್ದರೆ ಕಚೇರಿಯ ಸಮೀಪದಲ್ಲೇ ಬಾಡಿಗೆ ಕಟ್ಟಡದಲ್ಲಿ ಕೇಂದ್ರ ಆರಂಭಿಸಲಾಗುತ್ತದೆ. ಈ ಕೇಂದ್ರಗಳಿಗೆ ಅಂಗವಿಕಲರು ಖುದ್ದು ಭೇಟಿ ನೀಡಿ ಮಾಹಿತಿ ಕೇಳಬಹುದು. ದೂರವಾಣಿ ಮೂಲಕವೂ ಅಗತ್ಯ ಸಲಹೆ ಪಡೆಯಬಹುದು. ಸಹಾಯವಾಣಿ ಕೇಂದ್ರದ ಬಗ್ಗೆ ವ್ಯಾಪಕ ಪ್ರಚಾರವನ್ನೂ ಮಾಡಲಾಗುತ್ತದೆ.

‘ಸರ್ಕಾರ ಮಾತ್ರವಲ್ಲದೆ ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಸಹ ಅಂಗವಿಕಲರಿಗೆ ಅನೇಕ ಸೌಲಭ್ಯ– ಸವಲತ್ತು ನೀಡುತ್ತಿದ್ದರೂ ಹೆಚ್ಚಿನ ಜನರಿಗೆ ಈ ಬಗ್ಗೆ ತಿಳಿವಳಿಕೆ ಇಲ್ಲ. ಸಹಾಯವಾಣಿ ಆರಂಭವಾದರೆ ಸುಲಭವಾಗಿ ಮಾಹಿತಿ ಲಭ್ಯವಾಗಲಿದೆ. ಮಕ್ಕಳ ಪಾಲನೆ– ಪೋಷಣೆ ಹಾಗೂ ಸರ್ಕಾರದ ಯೋಜನೆಗಳ ಲಾಭ ಪಡೆದು ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡುವ ಬಗ್ಗೆ ಅಂಗವಿಕಲ ಮಕ್ಕಳ ಪೋಷಕರಿಗೆ ಈ ಕೇಂದ್ರದ ಮೂಲಕ ಸಲಹೆ ಮಾರ್ಗದರ್ಶನವನ್ನೂ ನೀಡಲಾಗುತ್ತದೆ ಎನ್ನುತ್ತಾರೆ’ ಅಂಗವಿಕಲರ ಸಬಲೀಕರಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು.

ಮುಖ್ಯಾಂಶಗಳು
* ಸರ್ಕಾರದ ಯೋಜನೆಗಳ ಸಂಪೂರ್ಣ ಮಾಹಿತಿ
*ವಿವಿಧ ಸೌಲಭ್ಯ ಪಡೆಯಲು ಮಾರ್ಗದರ್ಶನ
* ಅಂಗವಿಕಲ ಮಕ್ಕಳ ಪೋಷಕರಿಗೂ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.