ಎಲ್ಲ 28 ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧೆ: ಬಿದರಿ

7

ಎಲ್ಲ 28 ಕ್ಷೇತ್ರಗಳಲ್ಲಿ ಎಸ್‌ಪಿ ಸ್ಪರ್ಧೆ: ಬಿದರಿ

Published:
Updated:

ಗದಗ: ‘ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ನ. 15ರೊಳಗೆ ಪೂರ್ಣಗೊಳಿಸಲಾ­ಗು ವುದು’ ಎಂದು ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ.ಶಂಕರ ಬಿದರಿ ಹೇಳಿದರು.ಭಾನುವಾರ ಇಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಕ್ಷೇತ್ರಗಳಲ್ಲೂ  ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಲಾಗುವುದು’ ಎಂದರು.‘ರಾಜ್ಯದಲ್ಲಿ ಪಕ್ಷದ ಸಂಘಟನೆ ಕಾರ್ಯ ನಡೆಯುತ್ತಿದೆ. ಈಗಾಗಲೇ 25 ಸಾವಿರ ಮಂದಿಗೆ ಸದಸ್ಯತ್ವ ನೀಡಲಾಗಿದೆ. ಅ. 4 ಮತ್ತು 5ರಂದು ಜಿಲ್ಲಾ ಸಮಿತಿ ರಚಿಸಲಾಗುವುದು. ಸೆ. 22 ಮತ್ತು 23ರಂದು ನಡೆಯುವ ರಾಜ್ಯ ಕಾರ್ಯಕಾರಣಿಯಲ್ಲಿ ಪಕ್ಷ ಸಂಘಟನೆ ಕುರಿತು ಪ್ರಮುಖವಾಗಿ ಚರ್ಚಿಸಲಾ­ಗುವುದು’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry