ಸೋಮವಾರ, ಮೇ 17, 2021
31 °C

ಎಸ್.ಎಂ.ಕೃಷ್ಣ- ಪರಮೇಶ್ವರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಶುಕ್ರವಾರ ಸಂಜೆ ರಾಜ್ಯಸಭಾ ಸದಸ್ಯ ಎಸ್. ಎಂ.ಕೃಷ್ಣ ಅವರನ್ನು ಭೇಟಿ ಮಾಡಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.



ಅವಧಿಗೂ ಮೊದಲೇ ಲೋಕಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಕಾರಣ ಈ ಭೇಟಿ ಮಹತ್ವ ಪಡೆದಿದೆ. ಕೃಷ್ಣ ಅವರ ಸದಾಶಿವನಗರದ ನಿವಾಸದಲ್ಲಿ ಇಬ್ಬರೂ ಮುಖಂಡರು ಚರ್ಚೆ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಕ್ಷೇತ್ರಕ್ಕೂ ವೀಕ್ಷಕರನ್ನು ನೇಮಿಸಬೇಕಿದೆ. ಯಾರನ್ನು ಯಾವ ಕ್ಷೇತ್ರದ ವೀಕ್ಷಕರಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.