ಸಂತೇಬೆನ್ನೂರು: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಅಂತರದ ಗೆಲುವಿನ ಬಗ್ಗೆ ಸಂಶಯವಿಲ್ಲ’ ಎಂದು ಕಾಂಗ್ರೆಸ್ ದಾವಣಗೆರೆ ಲೋಕಸಭಾ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದರು.

ಸಂತೇಬೆನ್ನೂರಿನಲ್ಲಿ ಗುರುವಾರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರೋಡ್ ಷೊ ಸಂದರ್ಭದಲ್ಲಿ ಅವರು ಮಾತನಾಡಿದರು.

ಶಾಸಕ ವಡ್ನಾಳ್ ರಾಜಣ್ಣ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಕಾರ್ಯಕ್ರಮಗಳನ್ನು ಘೋಷಿಸಿದೆ. ಕೆರೆಗಳಿಗೆ ನೀರು ತುಂಬಿಸಲು ಸುಮಾರು ₨ 532 ಕೋಟಿ ಹಣ ಮಂಜೂರು ಮಾಡಲಾಗಿದೆ. ಇದರಿಂದ ಶಾಶ್ವತವಾಗಿ ರೈತರಿಗೆ ನೀರು ಸಿಗಲಿದೆ ಎಂದು ವಿವರಿಸಿದರು.

ಮುಖಂಡರಾದ ವಡ್ನಾಳ್ ಜಗದೀಶ್, ವಡ್ನಾಳ್ ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಶಿವಕುಮಾರ್, ಅಸಾದುಲ್ಲಾ, ತಾಲ್ಲೂಕು ಪಂಚಾಯ್ತಿ ಸದಸ್ಯ ಜೆ.ರಂಗನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಸಿದ್ದಪ್ಪ, ಬಿ.ಎನ್.ರಾಜು, ಬಿ.ಜಿ.ನಾಗರಾಜ್, ತಾ. ಪಂ. ಸದಸ್ಯ ಕೊಟ್ರ ಬಸಪ್ಪ, ತಜ್ಮಲ್ ಸಾಬ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.