ಮಂಗಳವಾರ, ಜೂನ್ 22, 2021
24 °C

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರ್ವ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಇದೇ 28ರಿಂದ ಪ್ರಾರಂಭವಾ ಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಒಟ್ಟು 10,410 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ 10,088 ರೆಗ್ಯೂಲರ್‌ ವಿದ್ಯಾರ್ಥಿಗಳು ಹಾಗೂ 322 ಅನುತ್ತೀರ್ಣ ವಿದ್ಯಾರ್ಥಿಗಳು.ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೊಯಿಡಾ ತಾಲ್ಲೂಕುಗಳ 161 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಒಟ್ಟು 34 ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗುವರು. ಶಿರಸಿಯಲ್ಲಿ ಒಂದು ಖಾಸಗಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ಇದ್ದು, 98 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು ಎಂದು ಉಪನಿರ್ದೇಶಕ ಎಂ.ಎಸ್‌. ಪ್ರಸನ್ನಕುಮಾರ್‌ ತಿಳಿಸಿದ್ದಾರೆ. 

ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶ ಕರು ಹಾಗೂ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿದೆ.ಡೈಯಟ್ ಕುಮಟಾದಿಂದ ಆರು ಉಪನ್ಯಾಸಕರನ್ನು ಅಂತರ್ ಜಿಲ್ಲಾ ವಿಚಕ್ಷಕ ದಳವನ್ನಾಗಿ ನೇಮಿಸಲಾಗಿದೆ. ಪ್ರತಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಒಳಗೊಂಡ ತಂಡ ರಚಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಎರಡು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸ್ಥಾನಿಕ ವಿಚಕ್ಷಕ ದಳ ಪ್ರತಿ ದಿನ ಇರುವಂತೆ  ಕ್ರಮ ವಹಿಸಲಾಗಿದೆ.ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡದ ನಿರ್ದೇಶಕರು ಇದೇ 22ರಂದು ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆ ಕರೆದಿದ್ದು, ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.ಪರೀಕ್ಷಾ ಕಾರ್ಯ ಸುಗಮವಾಗಿ ನಡೆಸುವಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಬರೆಯದಂತೆ ಕ್ರಮ ವಹಿಸಲಾಗಿದೆ. ಪರೀಕ್ಷೆಯ ಗೌಪ್ಯ ಸಾಮಗ್ರಿಗಳನ್ನು ಕೇಂದ್ರಗಳಿಗೆ ಸಾಗಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿ ಚಾರಕರನ್ನು ಕ್ಲಸ್ಟರ್‌ನಿಂದ ಕ್ಲಸ್ಟರ್‌ಗೆ ಬದಲಾಯಿಸಲಾಗಿದೆ.ಮೌಲ್ಯಮಾಪನ: ಎಸ್ಸೆಸ್ಸೆಲ್ಸಿ ಪರೀಕ್ಷೆ ಏಪ್ರಿಲ್‌ 9ರಂದು ಮುಕ್ತಾಯ ಗೊಳ್ಳಲಿದೆ. ಶಿರಸಿಯ ಆರು ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಏ. 20ರಿಂದ ಪ್ರಾರಂಭ ವಾಗಲಿದೆ. ಸುಮಾರು 800 ಸಿಬ್ಬಂದಿ ಮೌಲ್ಯಮಾಪನ ಕಾರ್ಯ ನಿರ್ವಹಿಸಲಿದ್ದಾರೆ. ಮೌಲ್ಯಮಾಪನ ಕೇಂದ್ರಗಳಿಗೆ ಏ.10ರಂದು ಉತ್ತರ ಪತ್ರಿಕೆ ಬರಲಿದ್ದು, ಚುನಾವಣೆ ಪ್ರಯುಕ್ತ 19ರ ವರೆಗೆ ಅವುಗಳನ್ನು ಸಂಗ್ರಹಿಸಿ, ಸೂಕ್ತ ಭದ್ರತೆ ವ್ಯವ

ಸ ್ಥೆಗೊಳಿಸಲಾಗುವುದು. ಮೌಲ್ಯಮಾಪನ ಕೇಂದ್ರಗಳ ಸುತ್ತ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲು ಜಿಲ್ಲಾಧಿಕಾರಿಗೆ ಹಾಗೂ ಭದ್ರತಾ ವ್ಯವಸ್ಥೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ವಿನಂತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.