ಶುಕ್ರವಾರ, ಮೇ 20, 2022
20 °C

ಎಸ್ಸೆಸ್ಸೆಲ್ಸಿ ಪರೀಕ್ಷೆ: ಆರು ಅವಕಾಶ ಮಾತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಎದುರಿಸಲು ಒಬ್ಬ ವಿದ್ಯಾರ್ಥಿಗೆ ಆರು ಬಾರಿ ಮಾತ್ರ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ  ಮಾತನಾಡಿದ ಅವರು, ‘ಒಬ್ಬ ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ಆರು ಅವಕಾಶ ನೀಡಲಾಗುವುದು. ಆರನೇ ಪ್ರಯತ್ನದಲ್ಲೂ ಉತ್ತೀರ್ಣನಾಗದೇ ಇದ್ದರೆ, ಆ ವಿದ್ಯಾರ್ಥಿ ಹೊಸ ಪಠ್ಯಕ್ರಮ ಅಧ್ಯಯನ ಮಾಡಿ ಪರೀಕ್ಷೆ ಎದುರಿಸಬೇಕಾಗುತ್ತದೆ. ಈ ಸಂಬಂಧ ಶೀಘ್ರದಲ್ಲಿ ನಿಯಮ ಜಾರಿಗೊಳಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.