ಶನಿವಾರ, ನವೆಂಬರ್ 23, 2019
17 °C

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನ ನಿರಾಳ

Published:
Updated:

ಕುಶಾಲನಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ಮತ್ತಿತರ ವಿದ್ಯಾಸಂಸ್ಥೆಗಳ ಪರೀಕ್ಷೆ ಕೇಂದ್ರದಲ್ಲಿ ನೂರಾರು ವಿದ್ಯಾರ್ಥಿಗಳು ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದರು.ಪಟ್ಟಣದಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಫಾತಿಮ ಪ್ರೌಢಶಾಲೆ, ಸರ್ಕಾರಿ ಪಿಯು ಕಾಲೇಜು ಹಾಗೂ ಸಮೀಪದ ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು, ಸುಂಟಿಕೊಪ್ಪ ಸೇಂಟ್ ಮೆರೀಸ್ ಪ್ರೌಢಶಾಲೆ, ಸರ್ಕಾರಿ ಪಿಯು ಕಾಲೇಜು ಪ್ರೌಢಶಾಲಾ ವಿಭಾಗಗಳಲ್ಲಿನ ಕೇಂದ್ರಗಳಲ್ಲಿ 25 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ವಿದ್ಯಾರ್ಥಿಗಳಿಗೆ ಪೋಷಕರು ಕೂಡ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ, ಪರೀಕ್ಷಾ ಕೇಂದ್ರಗಳವರೆಗೆ ಬಂದು ತಮ್ಮ ತಮ್ಮ ಮಕ್ಕಳಿಗೆ ಸ್ಫೂರ್ತಿ ತುಂಬುತ್ತಿದ್ದ ದೃಶ್ಯ ಕಂಡುಬಂದಿತು.ಪರೀಕ್ಷೆ ಕೇಂದ್ರ ಸುತ್ತ 100 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪೊಲೀಸರ ಬಿಗಿ ಭದ್ರತೆಯ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 5 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ವ್ಯವಸ್ಥಿತ ಪರೀಕ್ಷೆ ನಡೆಸಲು ಒಟ್ಟು 18  ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 16 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರ ಮುಖ್ಯ ವೀಕ್ಷಕರಾಗಿ ಬಲ್ಕಿಸ್ ಬಾನು , ಇಬ್ಬರು ಜಾಗೃತ ದಳ ಸಿಬ್ಬಂದಿ ಕಾರ್ಯನಿರ್ವಹಿಸಿದರು.

ಪ್ರತಿಕ್ರಿಯಿಸಿ (+)