ಭಾನುವಾರ, ಮೇ 9, 2021
20 °C

ಎಸ್ಸೆಸ್ಸೆಲ್ಸಿ ಪರೀಕ್ಷೆ:33 ವಿದ್ಯಾರ್ಥಿಗಳ ಡಿಬಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಟ್ಟು 33 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.  

ಕೋಲಾರ ಜಿಲ್ಲೆಯಲ್ಲಿ 18, ವಿಜಾಪುರದಲ್ಲಿ ಹತ್ತು, ಗುಲ್ಬರ್ಗದಲ್ಲಿ ಮೂವರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ.

ಸೋಮವಾರ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷಾ ವಿಷಯದ ಪರೀಕ್ಷೆ ನಡೆಯಿತು. ನಕಲು ಪ್ರಕರಣಗಳನ್ನು ಹೊರತುಪಡಿಸಿದರೆ ಎಲ್ಲ ಕಡೆ ಸುಸೂತ್ರವಾಗಿ ಪರೀಕ್ಷೆ ನಡೆಯಿತು ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.