ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ

ಬುಧವಾರ, ಜೂಲೈ 24, 2019
27 °C

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ

Published:
Updated:

ಬೆಂಗಳೂರು: ಕಳೆದ ತಿಂಗಳು ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಗುರುವಾರ ಸಂಜೆ 4ರ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಡಿ.ವೆಂಕಟೇಶಯ್ಯ ತಿಳಿಸಿದ್ದಾರೆ.ರಾಜ್ಯದ ಎಲ್ಲ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ 10ಕ್ಕೆ ಫಲಿತಾಂಶ ಪಟ್ಟಿಯನ್ನು ಪಡೆದು ಮಧ್ಯಾಹ್ನ 12ಕ್ಕೆ ಶಾಲೆಗಳಲ್ಲಿ ಪ್ರಕಟಿಸಬೇಕು ಎಂದು ಅವರು ಸೂಚಿಸಿದ್ದಾರೆ.ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗುರುವಾರ ಸಂಜೆ 5ರ ನಂತರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪಡೆಯಬಹುದು ಎಂದು ಅವರು ಹೇಳಿದ್ದಾರೆ.ವೆಬ್‌ಸೈಟ್ ವಿಳಾಸ:

http://schooleducation.kar.nic.in  

http://karresults.nic.in

http://sslc.kar.nic.in

www.exametc.com

www.manabadi.co.in

www.kannada.oneindia.in

www.oneindia.in

www.karnataka.com

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry