ಬುಧವಾರ, ಮೇ 12, 2021
18 °C

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ವದಂತಿಗಳಿಗೆ ಕಿವಿಗೊಡದಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕಾರ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ಹಾಗೂ ವದಂತಿಗಳಿಗೆ ಕಿವಿಗೊಡದೆ ಮೌಲ್ಯಮಾಪನ ಕಾರ್ಯಕ್ಕೆ ಎಲ್ಲ ಶಿಕ್ಷಕರು ಸಕಾಲಕ್ಕೆ ಹಾಜರಾಗಬೇಕೆಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಲಿಂಗರಾಜು ಮನವಿ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸಂಘದಲ್ಲಿ ಯಾವುದೇ ಕಾರ್ಯನಿವಾರ್ಹಕ ಕಾರ್ಯದರ್ಶಿ ಎಂಬ ಹುದ್ದೆ ಇಲ್ಲ. ಜಿ.ಸಿ.ಶಂಕರ್ ಎಂಬಾತ ತಾನು ಕಾರ್ಯನಿರ್ವಾಹಕ ಕಾರ್ಯದರ್ಶಿ ಎಂದು ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಬಹಿಷ್ಕಾರ ವಾಪಸ್ ಪಡೆದಿಲ್ಲ ಎಂದು ಹೇಳಿಕೆ ನೀಡಿದ್ದು, ಈ ಹೇಳಿಕೆಗೂ ಅಧಿಕೃತ ನಮ್ಮ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಏ.9ರಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದಾರೆ. ವಿಶೇಷ ಭತ್ಯೆ ಸೇರಿದಂತೆ ವೇತನ ತಾರತಮ್ಯ ನಿವಾರಣೆಗೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಶಿಕ್ಷಕರು ಗೊಂದಲಕ್ಕೆ ಒಳಗಾಗದೇ. ಏ.22ರಿಂದ ಆರಂಭಗೊಳ್ಳುವ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಬೇಕೆಂದು ಅವರು ಕೋರಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.