ಬುಧವಾರ, ಮೇ 18, 2022
23 °C

ಎಸ್ಸೆಸ್ಸೆಲ್ಸಿ 2011-12ರ ಪೂರಕ ಪರೀಕ್ಷೆ: 250 ವಿದ್ಯಾರ್ಥಿಗಳು ಹಾಜರು

ಪ್ರಜಾವಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಆರಂಭವಾಗಿದ್ದು ದೇವನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು 250 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಎಚ್.ವಿ.ವೆಂಕಟೇಶಯ್ಯ  ತಿಳಿಸಿದರು.



ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 2500 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆಯುತ್ತಿದ್ದಾರೆ.



ಜಿಲ್ಲೆಯ ನಾಲ್ಕು ತಾಲ್ಲೂಕು ಕೇಂದ್ರಗಳಲ್ಲಿ ತಲಾ ಎರಡು ಹಾಗೂ ಒಂದು ಖಾಸಗಿ ಸೇರಿದಂತೆ ಒಂಬತ್ತು ಪೂರಕ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖಾಸಗಿ ಎಂದು ಪರಿಗಣಿಸಲಾಗಿರುವ 700 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ  ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.



  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಅಭಿವೃದ್ಧಿ) ಎಸ್.ಕೆ.ಚನ್ನಬಸಪ್ಪ, ಪರೀಕ್ಷಾ ಕೇಂದ್ರ ಅಧೀಕ್ಷಕ ವೆಂಕಟೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.