ಹಾವೇರಿ: ವಿದ್ಯಾರ್ಥಿಗಳ ಶುಲ್ಕ ವಿನಾಯ್ತಿ ಹಣ ವಾಪಾಸ್ ಮಾಡದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಕವಿವಿ ಪರೀಕ್ಷಾ ಶುಲ್ಕ ಏರಿಕೆ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್ಎಫ್ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪ್ರತಿಭಟನೆ ಆರಂಭಿಸಿದ ಎಸ್ಎಫ್ಐ ಕಾರ್ಯಕರ್ತರು, ರಾಜ್ಯ ಸರ್ಕಾರದ ಶಿಕ್ಷಣ ವಿರೋಧ ನೀತಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾಹಾತ್ಮ ಗಾಂಧಿ ವೃತ್ತದ ಬಳಿ ಕೆಲ ಹೊತ್ತು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ಜಿಲ್ಲಾ ಸಮಿತಿ ಅಧ್ಯಕ್ಷೆ ರೇಣುಕಾ ಕಹಾರ ಮಾತನಾಡಿ, ರಾಜ್ಯ ಸರ್ಕಾರ ಪದೇ ಪದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವುದರಿಂದ ವಿದ್ಯಾರ್ಥಿ ಸಮುದಾಯ ಓದು ಬರಹ ಬಿಟ್ಟು ನಿತ್ಯ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಎಂದರು.

ಸರ್ಕಾರ ಈ ಹಿಂದೆ ಒಬಿಸಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡುವುದಾಗಿ ಹೇಳಿತ್ತು. ಆದರೀಗ ರಾಜ್ಯ ಸಕಾರ ತನ್ನ ವರಸೆ ಬದಲಿಸಿ ಶುಲ್ಕ ವಿನಾಯಿತಿಗೆ ಅಂಕಗಳನ್ನು ಮಾನದಂಡವನ್ನಾಗಿ ಪರಿಗಣಿಸುವುದು ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಮೋಸ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ಪರೀಕ್ಷಾ ಶುಲ್ಕಗಳನ್ನು ಏರಿಸುವ ಮೂಲಕ ವಿದ್ಯಾರ್ಥಿಗಳ ಮೇಲೆ ಹೊರೆ ಹಾಕಲು ಹೊರಟಿರುವ ಕವಿವಿ ಕೂಡಾ ತನ್ನ ನಿರ್ಧಾರ ಬದಲಿಸಿ, ಪರೀಕ್ಷಾ ಶುಲ್ಕ ಏರಿಕೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ. ಸುಭಾಷ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ, ಮುಖಂಡರಾದ ಶಿವರಾಜ ಕಲಕೇರಿ, ಜ್ಯೋತಿ ಶೇಷಗಿರಿ, ಮಂಜುಳಾ ಮಣ್ಣೂರ, ಶೈಲಾ ಅಚ್ಚಗೇರಿ, ಗೀತಾ ಹುಬ್ಬಳ್ಳಿ, ರೂಪಾ ಎಚ್, ಪ್ರಜಾ ಶೇಷಗಿರಿ, ಜಯಶ್ರೀ ಬ್ಯಾಡಗಿ, ವಿರೇಶ ಕುರುಬರ, ರಾಜು ಕುರುಬರ, ಮಹಮ್ಮದ್ ರಫೀಕ್ ಎಂ.ಬಿ., ಫಕ್ಕಿರೇಶ ಬಾರ್ಕಿ, ಪ್ರಕಾಶ ವಡ್ಡರ, ಮಧುಕರ ಯಾದವ, ರಾಜು ಜಿ. ನಿಸ್ಸಾರ್ಹ್ಮದ್ ಮಾಗಡಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬ್ಯಾಡಗಿ: ಪ್ರತಿಭಟನೆ
ಬ್ಯಾಡಗಿ : ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಪೆಡರೇಶನ್ (ಎಸ್ಎಫ್ಐ) ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಶಿವಶಂಕರ ನಾಯಕ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. "

ನೇತೃತ್ವ ವಹಿಸಿದ್ದ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಭೋವಿ ಮಾತನಾಡಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಬಹಳಷ್ಟು ಹಾಸ್ಟೆಲ್ಗಳಲ್ಲಿ ಶೌಚಾಲಯ ವ್ಯವಸ್ಥೆ ಹದೆಗೆಟ್ಟಿದ್ದು ವಿದ್ಯಾರ್ಥಿಗಳ ಸಂಖ್ಯೆಗಳಿನು ಸಾರವಾಗಿ ಶೌಚಾಲಯಗಳನ್ನು ನಿರ್ಮಿಸಬೇಕು, ಚಳಿಗಾಲ ಹಾಗೂ ಮಳೆಗಾಲದಲ್ಲಿ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು, ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ವಾಚನಾಲಯ ವ್ಯವಸ್ಥೆ ಕಲ್ಪಿಸಿ ದಿನಪತ್ರಿಕೆಗಳನ್ನು ಪೂರೈಕೆ ಮಾಡುವಂತೆ ಇಲಾಖೆಯ ಮುಖ್ಯಸ್ಥರಿಗೆ ನಿರ್ದೇಶನ ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ನಿಜಾಮುದ್ದೀನ್ ನೆಗಳೂರ, ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ ಪೂಜಾರ, ಗಣೇಶ ಲಮಾಣಿ, ಅಣ್ಣಯ್ಯ ದೊಡ್ಮನಿ, ನಾಗರಾಜ ಓಲೇಕಾರ, ಸಿ.ಎಚ್.ಹುಚ್ಚರಾಯಪ್ಪ, ಎಲ್.ಪ್ರಶಾಂತ, ಪುಟ್ಟಪ್ಪ ತಳವಾರ, ಸಂಜೀವ, ರಾಘವೇಂದ್ರ, ಎನ್.ಉಮೇಶ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.