ಬುಧವಾರ, ಜೂನ್ 16, 2021
27 °C

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ:ಜಿಲ್ಲೆಗೆ 10ನೇ ಸ್ಥಾನ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾಪೂರ್ವ ಸಿದ್ಧತೆ ಹಾಗೂ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಈ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯು 10ನೇ ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಣ ಸಂಯೋಜಕ ಹಾಗೂ ನೋಡಲ್ ಅಧಿಕಾರಿ ಸೋಮಶೇಖರ ಹರ್ತಿ ಮಾತನಾಡಿ, ತಾಲ್ಲೂಕಿನ 4 ಸಾವಿರ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಸಿದ್ಧತೆ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದರು.ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಮಮತಾ, ಯೂನಿಸೆಫ್‌ನ ಮಕ್ಕರ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕ ಹರೀಶ್ ಜೋಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾದ ರಾಜೇಶ ಪೂಜಾರ, ನಾಗನಗೌಡ ಜುಮ್ಮಣ್ಣವರ್, ನಜೀರ ಅಹ್ಮದ್, ದೇವಪ್ಪ ಬಚ್ಚಕನವರ್, ರಾಜೇಶ್ ಅಂಗಡಿ, ನಾಗರಾಜ ರಾಟಿ, ವೀರಣ್ಣ ಮಟ್ಟಿ, ರಹಿಮುನ್ನೀಸಾ ಬೇಗಂ ಸಂವಾದ ಕಾರ್ಯಕ್ರಮ ನಡೆಸಿದರು.ಪ್ರಭಾರಿ ಮುಖ್ಯ ಶಿಕ್ಷಕ ಅಶೋಕ ಭದ್ರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಶಿಕ್ಷಕ ದೇವಪ್ಪ ವಂದಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.