ಬೆಂಗಳೂರು: ಮುಂದಿನ ತಿಂಗಳ ಎರಡರಿಂದ 16ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 8.39 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ರಾಜ್ಯದಾದ್ಯಂತ 3,002 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ 16 ಸಾವಿರದಷ್ಟು ಕಡಿಮೆಯಾಗಿದೆ. ಕಳೆದ ವರ್ಷ 8.55 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಹಿಂದಿನ ವರ್ಷ ಉತ್ತಮ ಫಲಿತಾಂಶ ಬಂದಿರುವುದರಿಂದ ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆ ಸುಮಾರು 7 ಸಾವಿರದಷ್ಟು ಕಡಿಮೆಯಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧ್ಯಕ್ಷ ಡಿ.ವೆಂಕಟೇಶಯ್ಯ `ಪ್ರಜಾವಾಣಿ~ಗೆ ತಿಳಿಸಿದರು.

ಮೂರು ವಿಭಾಗಗಳಿಗೆ ಈಗಾಗಲೇ ಪ್ರವೇಶ ಪತ್ರಗಳನ್ನು ಕಳುಹಿಸಿಕೊಡಲಾಗಿದೆ. ಬೆಂಗಳೂರು ವಿಭಾಗಕ್ಕೆ ಈ ತಿಂಗಳ 10ರ ನಂತರ ಪ್ರವೇಶ ಪತ್ರಗಳನ್ನು ಕಳುಹಿಸಿಕೊಡಲಾಗುವುದು. ಅಗತ್ಯವಿದ್ದರೆ ಡೆಸ್ಕ್ಗಳನ್ನು ಬಾಡಿಗೆಗೆ ಪಡೆಯಬೇಕು ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಹೊಸ ಅಭ್ಯರ್ಥಿಗಳಲ್ಲಿ 3,81,639 ಬಾಲಕರು, 3,64,377 ಬಾಲಕಿಯರು. ಪುನರಾವರ್ತಿತ ಅಭ್ಯರ್ಥಿಗಳಲ್ಲಿ 49,868 ಬಾಲಕರು, 20,631 ಬಾಲಕಿಯರು ಮತ್ತು ಖಾಸಗಿ ಅಭ್ಯರ್ಥಿಗಳಲ್ಲಿ 17,361 ಬಾಲಕರು ಮತ್ತು 5,168 ಬಾಲಕಿಯರು ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.