ಶುಕ್ರವಾರ, ಮೇ 7, 2021
20 °C

ಎಸ್‌ಎಸ್‌ಎಲ್‌ಸಿ: ಬಹಿಷ್ಕಾರ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೇತನ ತಾರತಮ್ಯ ಹಾಗೂ ಬಡ್ತಿಯಲ್ಲಿನ ಗೊಂದಲಗಳನ್ನು ಸರಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿಯಲು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತೀರ್ಮಾನಿಸಿದೆ.ಸಂಘದ ಪದಾಧಿಕಾರಿಗಳೊಂದಿಗೆ ಸೋಮವಾರ ಚರ್ಚೆ ನಡೆಸಿದ ಕಾಗೇರಿ, ಮಾಸಿಕ 500 ರೂಪಾಯಿ ವಿಶೇಷ ವೇತನ ನೀಡುವ ಕುರಿತು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ಶೇ 75:25ರ ಪ್ರಮಾಣದಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡಲು ಸಮ್ಮತಿಸಿದ್ದಾರೆ.ಹೀಗಾಗಿ ಇದೇ 22ರಿಂದ ನಡೆಯುವ ಮೌಲ್ಯಮಾಪನವನ್ನು ಬಹಿಷ್ಕರಿಸುವ ನಿರ್ಣಯವನ್ನು ಕೈಬಿಡಲಾಗಿದೆ. ಎಲ್ಲ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.