ಎಸ್‌ಡಿಎಂ: 20ರಂದು ಹಿರಿಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಂಗಳವಾರ, ಜೂಲೈ 16, 2019
25 °C

ಎಸ್‌ಡಿಎಂ: 20ರಂದು ಹಿರಿಯ ವಿದ್ಯಾರ್ಥಿ ಸಂಘ ಉದ್ಘಾಟನೆ

Published:
Updated:

ಬೆಂಗಳೂರು:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 20ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಸ್.ಹೊಳ್ಳ ತಿಳಿಸಿದರು.`ಅಂದು ಬೆಳಿಗ್ಗೆ 10.30ಕ್ಕೆ ನಗರದ ಬುಲ್ ಟೆಂಪಲ್ ರಸ್ತೆಯಲ್ಲಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸುವರು' ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಬೆಂಗಳೂರಿನಲ್ಲಿರುವ ವಿದ್ಯಾರ್ಥಿಗಳನ್ನು ಸಂಘಟಿಸಲಾಗಿದೆ. ಸಾವಿರಕ್ಕೂ ಹೆಚ್ಚು ಹಳೇ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕಾಲೇಜಿನ ನೆನಪುಗಳನ್ನು ಮೆಲುಕು ಹಾಕುವ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಗುವುದು ಎಮದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry