ಗುಲ್ಬರ್ಗ: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಎಸ್.ಎಂ.ಶರ್ಮಾ ಅವರು ಗುಲ್ಬರ್ಗ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ್ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಅವರು ಜಿಲ್ಲಾಧಿಕಾರಿ ಕಚೇರಿ ತಲುಪಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಹಲವಾರು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಭ್ರಷ್ಟಾಚಾರ, ಜಾತೀಯತೆ, ಸ್ವಜನ ಪಕ್ಷಪಾತದಲ್ಲಿ ಮುಳುಗಿವೆ. ಅಲ್ಲದೇ, ಅವಕಾಶಕ್ಕಾಗಿ ಕಾಯುತ್ತಿದ್ದು, ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ಹೊಸ ರಾಜಕೀಯ ಶಕ್ತಿಯಾಗಿ, ಶೋಷಿತ ಜನರ ದನಿಯಾಗಿ ಕೆಲಸ ಮಾಡುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ’ ಎಂದು ತಿಳಿಸಿದರು.

ಗೌಸ್ ಪಟೇಲ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.