ಶುಕ್ರವಾರ, ಏಪ್ರಿಲ್ 23, 2021
24 °C

ಎಸ್. ಎಂ ಕೃಷ್ಣ ಭೇಟಿ ಮಾಡಿದ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರನ್ನು ಭೇಟಿಮಾಡಿ ಕೆಲಕಾಲ ಮಾತುಕತೆ ನಡೆಸಿದರು.ವಿದೇಶಾಂಗ ವ್ಯವಹಾರಗಳ ಸಚಿವರಾಗಿದ್ದ ಕೃಷ್ಣ ಅವರು ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಗರಕ್ಕೆ ಹಿಂದಿರುಗಿರುವ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿರಲಿಲ್ಲ. ಈ ಕಾರಣದಿಂದ ಮಂಗಳವಾರ ಬೆಳಿಗ್ಗೆ ಸದಾಶಿವನಗರದಲ್ಲಿರುವ ಕೃಷ್ಣ ನಿವಾಸಕ್ಕೆ ತೆರಳಿದ ಅವರು, ಕೆಲವು ಕಾಲ ಮಾತುಕತೆ ನಡೆಸಿದರು.ಸಿದ್ದರಾಮಯ್ಯ ಮತ್ತು ಕೃಷ್ಣ ಭೇಟಿಯ ವೇಳೆ ಶಾಸಕ ಬಿ.ಸಿ.ಪಾಟೀಲ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕೂಡ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.