ಏಕದಿನ ಕ್ರಿಕೆಟ್ ರ‌್ಯಾಂಕಿಂಗ್: ಭಾರತಕ್ಕೆ ಮೂರನೇ ಸ್ಥಾನ

7

ಏಕದಿನ ಕ್ರಿಕೆಟ್ ರ‌್ಯಾಂಕಿಂಗ್: ಭಾರತಕ್ಕೆ ಮೂರನೇ ಸ್ಥಾನ

Published:
Updated:

ದುಬೈ (ಐಎಎನ್‌ಎಸ್/ಪಿಟಿಐ): ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು 5-0 ರಲ್ಲಿ ತನ್ನದಾಗಿಸಿಕೊಂಡ ಭಾರತ ತಂಡ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಏಕದಿನ ರ‌್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿದೆ. ಮಹೇಂದ್ರ ಸಿಂಗ್ ದೋನಿ ಬಳಗ ಈಗ 118 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದೆ.ಇಂಗ್ಲೆಂಡ್ ವಿರುದ್ಧದ ಸರಣಿಗೆ ಮುನ್ನ ಭಾರತ 106 ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿತ್ತು. ಆಸ್ಟ್ರೇಲಿಯ 129 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಶ್ರೀಲಂಕಾ (119) ಬಳಿಕದ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ (117) ಮತ್ತು ಇಂಗ್ಲೆಂಡ್ (106) ನಾಲ್ಕು ಹಾಗೂ ಐದನೇ ಸ್ಥಾನಗಳಲ್ಲಿವೆ.ಭಾರತ ತಂಡದ ನಾಯಕ ದೋನಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡು ಕ್ರಮಾಂಕ ಮೇಲಕ್ಕೇರಿದ್ದು, ಮೂರನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ದೋನಿ, `ಸರಣಿ ಶ್ರೇಷ್ಠ~ ಪ್ರಶಸ್ತಿ ಪಡೆದಿದ್ದರು. ಆಫ್ ಸ್ಪಿನ್ನರ್ ಆರ್. ಅಶ್ವಿನ್ ಇದೇ ಮೊದಲ ಬಾರಿಗೆ ಅಗ್ರ 20 ರಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡಿನ ಈ ಬೌಲರ್ 16 ಕ್ರಮಾಂಕ ಮೇಲಕ್ಕೇರಿದ್ದು, 20ನೇ ಸ್ಥಾನ ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry