ಧಾರವಾಡ: ಎಚ್ಐವಿ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ. ಈ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ. ಇದರ ನಿಯಂತ್ರಣಕ್ಕೆ ಹೆಚ್ಚಿನ ಪ್ರಚಾರ ನೀಡುವ ಅವಶ್ಯವಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಡಿವೆಪ್ಪ ಮನಮಿ ಶನಿವಾರ ಇಲ್ಲಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಂಟಿಯಾಗಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ರೈಲು ನಿಲ್ದಾಣದಲ್ಲಿ ಆಯೋಜಿಸಿದ್ದ ರೆಡ್ರಿಬ್ಬನ್ ಎಕ್ಸ್ಪ್ರೆಸ್ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೇಯರ್ ಡಾ. ಪಾಂಡುರಂಗ ಪಾಟೀಲ ಮಾತನಾಡಿ, `ಇಂದು ನಮ್ಮ ದೇಶ ಸಾಕಷ್ಟು ಮುಂದುವರೆದರೂ ಎಚ್ಐವಿ ಸೋಂಕಿನಿಂದ ಮುಕ್ತಿ ಪಡೆಯಲಾಗಿಲ್ಲ. ದೇಶದಲ್ಲಿ ಎಲ್ಲ ನಾಗರಿಕ ರು ಆರೋಗ್ಯದಿಂದ ಇದ್ದಾಗ ಮಾತ್ರ ಉತ್ತಮ ದೇಶ ಕಟ್ಟಲು ಸಾಧ್ಯ~ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಚಂದ್ರತಾಂತ ಬೆಲ್ಲದ, ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಏಡ್ಸ್ ರೋಗವನ್ನು ಸಂಪೂರ್ಣವಾಗಿ ತೊಲಗಿಸುವತ್ತ ಜನಪ್ರತಿನಿಧಿಗಳಿಂದ ಹಿಡಿದು ಸಾಮಾನ್ಯ ಜನರೂ ಸಹ ಕೆಲಸ ಮಾಡಬೇಕಿದೆ ಎಂದರು. ಶಾಸಕರಾದ ವೀರಭದ್ರಪ್ಪಹಾಲಹರವಿ, ಸೀಮಾ ಮಸೂತಿ ಶ್ರೀನಿವಾಸ ಮಾನೆ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.