ಗುರುವಾರ , ಮೇ 13, 2021
35 °C

ಏಪ್ರಿಲ್ 20ರಿಂದ ಪದವಿ ಮರು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಆಗಸ್ಟ್ 2011ರಲ್ಲಿ ಬಳ್ಳಾರಿಯ ಸುಗೇಶ್ವರ ವಿದ್ಯಾ ಸಂಸ್ಥೆ, ಕೊಪ್ಪಳದ ವಿಶ್ವಭಾರತಿ ವಿದ್ಯಾಸಂಸ್ಥೆ, ದಾವಣಗೆರೆಯ ದಿಕ್ಸೂಚಿ ಅಧ್ಯಯನ ಕೇಂದ್ರಗಳಲ್ಲಿ ಮುಂದೂಡಲ್ಪಟ್ಟ ಪದವಿ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ಏಪ್ರಿಲ್ 20 ರಿಂದ ಪ್ರಾರಂಭವಾಗಲಿವೆ. ಪರೀಕ್ಷೆಯ ವೇಳಾಪಟ್ಟಿ ಹಾಗೂ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಬೆಂಗಳೂರು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದಾಗಿದ್ದು, ಮರು ಪರೀಕ್ಷೆಯ ವೇಳಾಪಟ್ಟಿಯನ್ನು ಪಡೆದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ವಿತರಿಸಿರುವ ಪ್ರವೇಶಪತ್ರ ಹಾಗೂ ಗುರುತಿನ ಚೀಟಿ ಹಾಜರುಪಡಿಸಿ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ವಿಶ್ವವಿದ್ಯಾಲಯದ ವೆಬ್‌ಸೈಟ್: www.dccbub.in.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.