ಶುಕ್ರವಾರ, ಏಪ್ರಿಲ್ 16, 2021
30 °C

ಏರ್‌ಇಂಡಿಯಾ: ಮುಷ್ಕರ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಏರ್‌ಇಂಡಿಯಾ ಸಂಸ್ಥೆಯ ಪೈಲೆಟ್‌ಗಳು ಮುಂದಿನ ವಾರ ಮುಷ್ಕರ ನಡೆಸಲು ಉದ್ದೇಶಿಸಿದ್ದು, ಇದನ್ನು ತಡೆಯಲು ಎಲ್ಲ ಪ್ರಯತ್ನಗಳನ್ನು ನಡೆಸುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‘ಏರ್ ಇಂಡಿಯಾ ಸದ್ಯ ಕಷ್ಟದ ದಿನಗಳನ್ನು ಎದುರಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳ ಮುಷ್ಕರ ಸಂಸ್ಥೆಗೆ ಮತ್ತಷ್ಟು ಹಾನಿಯುಂಟು ಮಾಡಲಿದೆ. ಆದ್ದರಿಂದ ಉದ್ದೇಶಿತ ಮುಷ್ಕರ ತಡೆಯಲು ಸರ್ವ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಭಾರತೀಯ ವಾಣಿಜ್ಯ ಪೈಲೆಟ್‌ಗಳ ಒಕ್ಕೂಟ (ಐಸಿಪಿಎ) ಈಗಾಗಲೇ ಮುಂದಿನ ವಾರ ಮುಷ್ಕರ ನಡೆಸುವುದಾಗಿ ಏರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಜಾದವ್ ಅವರಿಗೆ ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.