ಮಂಗಳವಾರ, ಮೇ 18, 2021
28 °C

ಏರ್ ಇಂಡಿಯಾ ನಷ್ಟ ರೂ 7850 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನ ಸಂಸ್ಥೆ 2011-12ನೇ ಸಾಲಿನಲ್ಲಿ 7853 ಕೋಟಿ ರೂಪಾಯಿ ನಷ್ಟಕ್ಕೆ ಗುರಿಯಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್, ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. 2011-12ನೇ ಸಾಲಿನ ಬಜೆಟ್‌ನಲ್ಲಿ ನೀಡಿದ್ದ 1200 ಕೋಟಿ ರೂ. ಒಳಗೊಂಡಂತೆ ಕಂಪನಿಗೆ ಹೊಸದಾಗಿ 6750 ಕೋಟಿ ರೂಪಾಯಿ ಬಂಡವಾಳವನ್ನು ಮುಂಗಡವಾಗಿ ಒದಗಿಸಲಾಗಿದೆ. ಪರಿವರ್ತಿಸಲಾಗದ ಸಾಲಪತ್ರಗಳ ಮೊತ್ತವಾದ 7400 ಕೋಟಿ ಅಸಲು ಹಾಗೂ ಬಡ್ಡಿ ಮರುಪಾವತಿಗೆ ಸಂಬಂಧಿಸಿದಂತೆ ಸರ್ಕಾರ ಖಾತ್ರಿ ಒದಗಿಸಿದೆ ಎಂದು ಸಿಂಗ್ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.