ಶ್ರೀರಂಗಪಟ್ಟಣ: ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಕಷ್ಟವಾಗಿದ್ದು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಮೂಲಕ ಪರೀಕ್ಷೆ ಎದುರಿಸುವ ಅನುಭವ ಮಾಡಿಕೊಡಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಧಾರವಾಡದ ಬಾಲ ವಿಕಾಸ ಅಕಾಡೆಮಿ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಶುಕ್ರವಾರ `ಮಕ್ಕಳೇ ಪರೀಕ್ಷೆಗೆ ಸಿದ್ದರಾಗಿ~ ಘೋಷಣೆಯಡಿ ಏರ್ಪಡಿಸಿದ್ದ ವಿದ್ಯಾರ್ಥಿಗಳು ಮತ್ತು ಪಾಲಕರ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

`7ನೇ ತರಗತಿಗೆ ಪರೀಕ್ಷೆ ಇದ್ದಾಗ ಶಿಕ್ಷಣದ ಗುಣಮಟ್ಟ ಚೆನ್ನಾಗಿತ್ತು. ಆದರೆ ಈಗ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಅಸಡ್ಡೆ ಮೂಡುತ್ತಿದೆ. ಸರ್ಕಾರಿ ಶಾಲೆಗಳ ಶಿಕ್ಷಕರು ಕೂಡ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಸಾಕಷ್ಟು ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕ್ಷೀಣಿಸುತ್ತಿದೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ. ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಹಶೀಲ್ದಾರ್ ಅರುಳ್ಕುಮಾರ್, ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಲಿಂಗು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ತಾ.ಪಂ. ಇಒ ಕೆ.ವಿ.ಅಮರನಾಥ್, ಬಿಇಒ ಕೆ.ಜಗದೀಶ್, ಸಿಡಿಪಿಒ ಮಂಜುನಾಥ್, ಬಲ್ಲೇನಹಳ್ಳಿ ಶಂಕರ್, ಸೋಮಣ್ಣ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.