ಮೀರ್ಪುರ್ (ಢಾಕಾ) (ಐಎಎನ್ಎಸ್): ವಿರಾಟ್ ಕೊಹ್ಲಿ (ಅಜೆಯ 183 ರನ್, 148 ಎಸೆತ) ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಭಾನುವಾರ ನಡೆದ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ದ ಆರು ವಿಕೆಟ್ಗಳ ಗೆಲುವು ಸಾಧಿಸಿತು.

ಶೇರ್ ಎ ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ತಂಡವು ಆರಂಭಿಕ ಬ್ಯಾಟ್ಸ್ಮನ್ಗಳಾದ ಮೊಹಮ್ಮದ್ ಹಫಿಜ್ ಹಾಗೂ ನಾಸಿರ್ ಜಮಷೆದ್ ಅವರ ಅಮೋಘ ಜತೆಯಾಟದ ಫಲವಾಗಿ 6 ವಿಕೆಟ್ ನಷ್ಟಕ್ಕೆ 229 ರನ್ಗಳ ಮೊತ್ತ ಪೇರಿಸಿತು.

ಪಾಕ್ ಒಡ್ಡಿದ ಮೊತ್ತ ಬೆನ್ನಟ್ಟಿದ ಭಾರತ ತಂಡಕ್ಕೆ ಬೆನ್ನೆಲುಬಾಗಿ ನಿಂತ ವಿರಾಟ್ ಕೊಹ್ಲಿ ಅಜೇಯರಾಗಿ 148 ಎಸೆತಗಳಲ್ಲಿ 22 ಬೌಂಡರಿ ಹಾಗೂ 1 ಸಿಕ್ಸ್ ಬಾರಿಸಿ ಸಮಯೋಚಿತ ಆಟದಿಂದ183 ರನ್ ಗಳಿಸಿದ ಪರಿಣಾಮ ~ಮಹಿಪಡೆ~ 47.5 ಓವರ್ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಪಾಕ್ ಮಣಿಸಿ ಗೆಲುವಿನ ನಗೆ ಬೀರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.