ಶುಕ್ರವಾರ, ಜೂನ್ 18, 2021
28 °C

ಏ.1ಕ್ಕೆ ನಾಗರಿಕ ಸೇವಾ ಖಾತ್ರಿ ಕಾಯ್ದೆ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಜಿಲ್ಲೆಯಲ್ಲಿ ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು~ ಎಂದು ಜಿಲ್ಲಾಧಿಕಾರಿ ಕೆ.ಆರ್. ಸುಂದರ್ ಹೇಳಿದರು.ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಬುಧವಾರ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ  ಪಂಚಾಯಿತಿಯಿಂದ ಅಧಿಕಾರಿಗಳಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಕಾಯ್ದೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರದಿಂದ ದೊರೆಯುವ ಸೌಲಭ್ಯ, ಪ್ರಮಾಣಪತ್ರಗಳು ಎಷ್ಟು ಅವಧಿಯೊಳಗೆ ನೀಡಬೇಕು ಎಂಬ ಬಗ್ಗೆ ಸಾರ್ವಜನಿಕವಾಗಿ ಫಲಕ ಪ್ರದರ್ಶಿಸಲಾಗುತ್ತಿದೆ. ಈ ಕಾಯ್ದೆಯ ಅನುಷ್ಠಾನದಿಂದ ಕಾಲಮಿತಿಯೊಳಗೆ ಜನರಿಗೆ ಸೌಲಭ್ಯ ಪಡೆಯುವ ಹಕ್ಕು ದಕ್ಕಿದೆ. ಸೇವಾ ಸೌಲಭ್ಯ ವಿಳಂಬವಾದರೆ ಸಂಬಂಧಪಟ್ಟ ನೌಕರ, ಅಧಿಕಾರಿಯಿಂದ ಪ್ರತಿದಿನ ಪರಿಹಾರವನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದರು.ಈಗಾಗಲೇ, ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕಾಯ್ದೆ ಜಾರಿಗೆ ಬಂದಿದೆ. ಚಾಮರಾಜನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಏ. 1ರಿಂದ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ.  11 ಇಲಾಖೆಗಳ 151 ಸೇವೆಗಳು ಕಾಯ್ದೆಯ ವ್ಯಾಪ್ತಿಗೆ ಬರಲಿವೆ ಎಂದರು.ಮೈಸೂರು ಎಸ್‌ಐಆರ್‌ಡಿ ನಿರ್ದೇಶಕ ಆಶ್ರಾಫ್ ಉಲ್ ಹಸನ್ ಮಾತನಾಡಿ, ಈಗಾಗಲೇ ಪ್ರಾಯೋಗಿಕವಾಗಿ ಕಾಯ್ದೆ  ಜಾರಿಯಲ್ಲಿರುವ ಜಿಲ್ಲೆಗಳ ನಾಲ್ಕು ತಾಲ್ಲೂಕಿನಲ್ಲಿ ನಿಗದಿತ ಅವಧಿಯೊಳಗೆ ಸೇವೆ ಸಲ್ಲಿಸದಿರುವ 682 ಅಧಿಕಾರಿಗಳಿಂದ ಪರಿಹಾರದ ವೆಚ್ಚ ವಸೂಲಿ ಮಾಡಲಾಗಿದೆ ಎಂದು ಹೇಳಿದರು.ಜಿ.ಪಂ. ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಪಿ. ಶಂಕರರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್. ಚಂದ್ರಶೇಖರ್, ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಎಂ.ಆರ್. ಸೋಮಶೇಖರಪ್ಪ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.