ಭಾನುವಾರ, ಜೂನ್ 20, 2021
20 °C

ಏ.2ರಿಂದ ನಾಗರಿಕ ಸೇವಾ ಖಾತರಿ ಅನುಷ್ಠಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ಖಾತರಿ ಅಧಿನಿಯಮ-2011 ಏಪ್ರಿಲ್ 2 ರಿಂದ ಅನುಷ್ಠಾನಗೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ್ ತಿಳಿಸಿದ್ದಾರೆ.ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ನಾಗರಿಕರಿಗೆ ಉತ್ತಮ ಸೇವೆ ನೀಡಲು ಸೇವಾಭಾವ ಹಾಗೂ ಶ್ರೀಸಾಮಾನ್ಯನ ದೃಷ್ಠಿಕೋನದಿಂದ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಕೊಡುವ ಸ್ಥಳದಲ್ಲಿ ಫ್ಲೆಕ್ಸ್ ಹಾಕಿಸಿ ಅದನ್ನು ಸ್ಕ್ಯಾನ್ ಮಾಡಿ ಜಿಲ್ಲಾಧಿಕಾರಿಯವರ  ಇ-ಮೇಲ್‌ಗೆ ಕಳುಹಿಸಿಕೊಡಲು ತಿಳಿಸಲಾಗಿದೆ.  ಸೇವೆಗಳ  ಖಾತರಿ ಅಧಿನಿಯಮದಲ್ಲಿ ನಮೂದಿಸಿದ ಸೇವೆಗಳ ಪೈಕಿ ಸದ್ಯ ಇರುವ ಕಾನೂನು,ನಿಯಮ, ಮಾರ್ಗಸೂಚಿ ಯಾವುದೇ ಮಾನದಂಡ ಅನುಸರಿಸಲು ಸಮಸ್ಯೆ ಇದ್ದರೆ ತಕ್ಷಣ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.