ಶನಿವಾರ, ಮೇ 21, 2022
23 °C

ಏ.23 ರಿಂದ ಅಖಿಲ ಭಾರತ ಜಾನಪದ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬರುವ ಏಪ್ರಿಲ್ 23, 24 ಹಾಗೂ 25ರಂದು ಬೀದರ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಜಾನಪದ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಮ್ಮೇಳನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮ್ಮೇಳನದ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳು ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನುಳಿದಂತೆ ವಿಚಾರಗೋಷ್ಠಿಗಳನ್ನು ರಂಗಮಂದಿರ ಸೇರಿದಂತೆ ಸೂಕ್ತ ಸಭಾಂಗಣದಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಒಟ್ಟು 19 ಉಪ ಸಮಿತಿಗಳನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಮೆರವಣಿಗೆ, ಆಹಾರ, ವಸತಿ, ಸಾರಿಗೆ, ವೇದಿಕೆ, ಪ್ರಚಾರ, ಮಂಟಪ, ಸ್ವಯಂಸೇವಕರು, ಮಹಿಳಾ, ಪುಸ್ತಕ ಮಳಿಗೆ ಪ್ರದರ್ಶನ, ಜಾಹೀರಾತು, ಕಲಾ ಪ್ರದರ್ಶನ, ಸ್ಮರಣ ಸಂಚಿಕೆ, ಶುಚಿತ್ವ, ನೋಂದಣಿ, ಆಹ್ವಾನ ಪತ್ರಿಕೆ ವಿತರಣೆ, ಕಾಮಗಾರಿ, ಆರೋಗ್ಯ ಮತ್ತು ವಸ್ತು ಪ್ರದರ್ಶನ ಉಪಸಮಿತಿಗಳನ್ನು ರಚಿಸಲಾಗಿದೆ. ಈ ಉಪಸಮಿತಿಗಳು ಕಾರ್ಯನಿರ್ವಹಣೆಯ ಪ್ರಸ್ತಾಪಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.ಸಮಿತಿಗಳು ತಮಗೆ ವಹಿಸಿರುವ ಹೊಣೆಯನ್ನು ಸರಿಯಾಗಿ ನಿರ್ವಹಿಸಬೇಕು. ಸಮಿತಿಗಳಿಗೆ ಅಗತ್ಯವಾದ ಎಲ್ಲ ನೆರವು ಒದಗಿಸಲಾಗುವುದು. ಕಾರ್ಯ ಅನುಷ್ಠಾನದ ಕುರಿತಾಗಿ ಉಪಸಮಿತಿಗಳು ಕೈಗೊಳ್ಳುವ ತೀರ್ಮಾನ ಅಂತಿಮ ಆಗಿರುವುದು ಎಂದು ಹೇಳಿದರು.ಸಮ್ಮೇಳನದಲ್ಲಿ ದೇಶದ ಎಲ್ಲ ರಾಜ್ಯಗಳಿಂದ ಜಾನಪದ ತಜ್ಞರು ಹಾಗೂ ಕಲಾವಿದರು ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 350 ಜಾನಪದ ಕಲಾವಿದರು ಭಾಗವಹಿಸಲಿದ್ದಾರೆ.ಸಮ್ಮೇಳನಕ್ಕೆ ಸುಮಾರು 1.26 ಕೋಟಿ ರೂ. ವೆಚ್ಚವಾಗುವ ಅಂದಾಜು ಮಾಡಲಾಗಿದೆ. ಈಗಾಗಲೇ 25 ಲಕ್ಷ ರೂ. ಬಿಡುಗಡೆಯಾಗಿದೆ. ಜಾನಪದ ಅಕಾಡೆಯಿಂದ 10ಲಕ್ಷ ರೂ, ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ ರೂ ಹಾಗೂ ಜಿಲ್ಲೆಯ ಅನುದಾನಿತ ಪ್ರೌಢ ಶಾಲೆಗಳ ಶಿಕ್ಷಕರಿಂದ ತಲಾ 250ರೂ. ನಂತೆ ಹಾಗೂ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ 10 ಸಾವಿರದಂತೆ ಇದುವರೆಗೆ ಒಟ್ಟು 56 ಲಕ್ಷ ರೂ. ಸಂಗ್ರಹವಾಗಿದೆ ಎಂದು ಅಕಾಡೆಮಿ ಸದಸ್ಯ ಜಗನ್ನಾಥ ಹೆಬ್ಬಾಳೆ ಮಾಹಿತಿ ನೀಡಿದರು.ಹೈದ್ರಾಬಾದ್ ಕರ್ನಾಟಕ ಜಿಲ್ಲೆಗಳ ಜಿಲ್ಲಾ ಪಂಚಾಯಿತಿನಿಂದ ಸಮ್ಮೇಳನಕ್ಕೆ ದೇಣಿಗೆ ಸಂಗ್ರಹಿಸಲು ಸರ್ಕಾರ ಈಗಾಗಲೇ ಅನುಮತಿ ನೀಡಿದೆ ಎಂದು ಅವರು ಹೇಳಿದರು. ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.