ಸೋಮವಾರ, ಮೇ 17, 2021
21 °C

ಐಎಎಸ್ ಅಧಿಕಾರಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ಸೇವೆಯಿಂದ ಅಮಾನತು ಮಾಡಿದೆ. ಐಎಎಸ್ ಅಧಿಕಾರಿಯೊಬ್ಬರು ಈ ರೀತಿ ಅಮಾನತು ಆಗಿರುವುದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು ಎನ್ನಲಾಗಿದೆ.ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದರು.ನಂತರ ಲೋಕಾಯುಕ್ತ ಪೊಲೀಸರು ಸರ್ಕಾರಕ್ಕೆ ಪತ್ರ ಬರೆದು ಶಮ್ಲಾ ಅವರನ್ನು ಅಮಾನತು ಮಾಡುವಂತೆ ಶಿಫಾರಸು ಮಾಡಿದ್ದರು.ಇದನ್ನು ಪರಿಶೀಲಿಸಿದ ಸರ್ಕಾರ ಅವರನ್ನು ಸೇವೆಯಿಂದ ಅಮಾನತು ಮಾಡಿದೆ. ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದೆ. 2002ನೇ ಗುಂಪಿನ ಐಎಎಸ್ ಅಧಿಕಾರಿಯಾದ ಶಮ್ಲಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಿರ್ದೇಶಕಿಯಾಗಿದ್ದಾಗ ಐಸಿಡಿಎಸ್ ಯೋಜನೆ ಅನುಷ್ಠಾನದಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.