ಸೋಮವಾರ, ಮೇ 16, 2022
28 °C

ಐಎಎಸ್ ದಂಪತಿ ಆಸ್ತಿ ಮುಟ್ಟುಗೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್ (ಪಿಟಿಐ): ಅಮಾನತುಗೊಂಡಿರುವ ಮಧ್ಯಪ್ರದೇಶದ ಐಎಎಸ್ ದಂಪತಿ ಅರವಿಂದ ಮತ್ತು ಟೀನು ಜೋಷಿ ಅವರ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದ್ದು ಅವರಿಬ್ಬರ 77 ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಿದೆ.1961ರ ಆದಾಯ ತೆರಿಗೆ ಕಾಯ್ದೆಯ  ಸೆಕ್ಷನ್ 281-ಬಿ ಅನ್ವಯ ಈ ಕ್ರಮ ಜರುಗಿಸಲಾಗಿದ್ದು, ತನಿಖೆ ಪೂರ್ಣಗೊಳ್ಳುವ ವರೆಗೆ ಕಳಂಕಿತ ಅಧಿಕಾರಿಗಳು ತಮ್ಮ ಆಸ್ತಿಯ ಮಾರಾಟ ಹಾಗೂ ಬ್ಯಾಂಕ್ ಖಾತೆಗಳನ್ನು ಬಳಸುವಂತಿಲ್ಲ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ.ಕಳೆದ ವರ್ಷ ಫೆಬ್ರುವರಿಯಲ್ಲಿ ಈ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮೂರು ಕೋಟಿ ರೂಪಾಯಿ ನಗದು ಹಣ ವಶಪಡಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ 360 ಕೋಟಿ ರೂಪಾಯಿ ಹೂಡಿಕೆಯ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.