ಶುಕ್ರವಾರ, ಜೂನ್ 25, 2021
27 °C

ಐಒಎ ಸಭೆಯಲ್ಲಿ ಸುರೇಶ್ ಕಲ್ಮಾಡಿ ಬಗ್ಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹಲವು ಆರೋಪಗಳಿಗೆ ಗುರಿಯಾಗಿರುವ ಸುರೇಶ್ ಕಲ್ಮಾಡಿ ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ವಿಷಯದ ಬಗ್ಗೆ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಶುಕ್ರವಾರ ಇಲ್ಲಿ ನಡೆಯಲಿರುವ ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಲಿದೆ.`ಕಲ್ಮಾಡಿ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ~ ಎಂದು ಕೇಳಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಐಒಎಗೆ ಮತ್ತೊಂದು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಡೆಯುತ್ತಿರವ ಈ ಸಭೆ ಕುತೂಹಲ ಕೆರಳಿಸಿದೆ. ಈ ಸಂಬಂಧ ಶೀಘ್ರದಲ್ಲಿ ಪ್ರತಿಕ್ರಿಯೆ ನೀಡುವಂತೆ ಐಒಸಿ ಸೂಚಿಸಿದೆ. ಈಗಾಗಲೇ ಅದು ಮೂರು ಪತ್ರ ಬರೆದಿದೆ.

ಕಲ್ಮಾಡಿ ಅಧಿಕೃವಾಗಿ ಐಒಎ ಅಧ್ಯಕ್ಷ ಸ್ಥಾನದಿಂದ ಇಳಿದಿಲ್ಲ. ಈ ಸಭೆಯಲ್ಲಿ ಇನ್ನೂ ಹಲವು ವಿಷಯಗಳ ಬಗ್ಗೆ ಐಒಎ ಸಮಾಲೋಚನೆ ನಡೆಸಲಿದೆ.`ಯಾವುದೇ ನಿರ್ಧಾರಕ್ಕೆ ಬರುವ ಮೊದಲ ಎಲ್ಲಾ ಸದಸ್ಯರ ಅಭಿಪ್ರಾಯ ಕೇಳುತ್ತೇವೆ. ಯಾವುದೇ ವ್ಯಕ್ತಿ ತಪ್ಪಿತಸ್ಥ ಎಂದು ಸಾಬೀತು ಆಗುವವರೆಗೆ ಆತ ಮುಗ್ಧ. ಕಲ್ಮಾಡಿಗೆ ಸಂಬಂಧಿಸಿದ ವಿಷಯ ನ್ಯಾಯಾಲಯದಲ್ಲಿದೆ. ಹಾಗಾಗಿ ಅಂತಿಮ ತೀರ್ಪು ಬರುವವರೆಗೆ ನಾವು ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ತಾಳ್ಮೆಯಿಂದ ಕಾಯಬೇಕು~ ಎಂದು ಐಒಎ ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.