ಬುಧವಾರ, ಜೂನ್ 23, 2021
23 °C

ಐಟಿಐಗಳಿಗೆ ಸೌಲಭ್ಯ; ಬಚ್ಚೇಗೌಡ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ:`ರಾಜ್ಯದಲ್ಲಿರುವ ಎಲ್ಲ ಐಟಿಐ ಗಳಿಗೆ ಉಪನ್ಯಾಸಕರ ನೇಮಕ ಹಾಗೂ ಮೂಲಸೌಲಭ್ಯಗಳನ್ನು ಒದಗಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು~ ಎಂದು ಕಾರ್ಮಿಕ ಸಚಿವ ಬಿ.ಎನ್ ಬಚ್ಚೇಗೌಡ ತಿಳಿಸಿದರು.ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬಾಷ್ ರಾಕ್ಸ್‌ರಾತ್ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡುತ್ತ ಈ ವಿಚಾರ ತಿಳಿಸಿದರು.ರಾಜ್ಯದ ಎಲ್ಲ ಐಟಿಐಗಳಲ್ಲಿ ಒಟ್ಟಾರೆ 2240 ಹುದ್ದೆಗಳಿದ್ದು 1300 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಇವರನ್ನೂ ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗಿದೆ. 500 ಹುದ್ದೆಗಳಿಗೆ ಜೆಓಸಿ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಉಳಿದ ಹುದ್ದೆಗಳಿಗೆ ಶೀಘ್ರದಲ್ಲೇ ಕೆಪಿಎಸ್‌ಸಿ ಮೂಲಕ ನೇಮಕ ಮಾಡಲಾಗುವುದು ಎಂದು ತಿಳಿಸಿದರು.ಅನೇಕ ಐಟಿಐಗಳಲ್ಲಿ ಮೂಲಸೌಲಭ್ಯದ ಕೊರತೆ ಇದೆ ಎಂಬುದು ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಅದನ್ನು ಒದಗಿಸಲಾಗುವುದು ಎಂದು ಬಚ್ಚೇಗೌಡ ತಿಳಿಸಿದರು.ಗ್ರಾಮೀಣ ಮಕ್ಕಳಿಗೆ ತರಬೇತಿ ಅಗತ್ಯ:ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಾಷ್ ಸಂಸ್ಥೆಯ ಸಹಯೋಗದಲ್ಲಿ ಆರಂಭಿಸಿರುವ ಪ್ರಾದೇಶಿಕ ತರಬೇತಿ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಸಮಾರಂಭದಲ್ಲಿ ಮಾತನಾಡಿದ ಬಚ್ಚೇಗೌಡ, `ಬೆಂಗಳೂರಿನ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲಗಳು, ಎಲ್ಲ ರೀತಿಯ ಸೌಲಭ್ಯಗಳು ಲಭ್ಯವಾಗುತ್ತವೆ. ಆದರೆ ಗ್ರಾಮೀಣ ಪ್ರದೇಶದ ಮಕ್ಕಳು ವಂಚಿತರಾಗುತ್ತಾರೆ. ಇಂಥ ಕೇಂದ್ರಗಳಿಂದ ಆ ಕೊರತೆಯನ್ನು ನೀಗಿಸ          ಬಹುದು~ ಎಂದರು.ಹಾಸನ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ಉದ್ದಿಮೆಗಳಿದ್ದು, ಅವುಗಳಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲೂ ಇಷ್ಟೊಂದು ಪ್ರಮಾಣದಲ್ಲಿ ಜನರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿಲ್ಲ~ ಎಂದರು.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ವಿ. ಸತ್ಯನಾರಾಯಣ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಕಾರ್ಯದರ್ಶಿ ಬಿ.ಕೆ. ಮಂಜುನಾಥ್  ಕಾಲೇಜಿನ ಬಗ್ಗೆ ವರದಿ ನೀಡಿದರು. ಉಪ ಪ್ರಾಂಶುಪಾಲ ಡಾ. ಎಸ್.ಆರ್. ಜಯರಾಂ, ಬಿ ಆರ್ ಸೆಂಟರ್‌ನ ರಾಜೇಂದ್ರ, ವ್ಯವಸ್ಥಾಪಕ ಚೇತನರಾಜ್ ದೇವ್ ಮತ್ತಿತರರು ವೇದಿಕೆಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.