ಮಂಗಳವಾರ, ಮೇ 18, 2021
29 °C

ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ

ಗುಲ್ಬರ್ಗ: ಬೇಸಿಗೆ ರಜೆ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಐಟಿಐ ಕಾಲೇಜು ವಿದ್ಯಾರ್ಥಿಗಳು ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ (ಎಐಎಸ್‌ಎಫ್) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.ಸರ್ಕಾರಿ ಐಟಿಐ ಕಾಲೇಜಿನಿಂದ ವೆುರವಣಿಗೆಯಲ್ಲಿ ಹೊರಟ ನೂರಾರು ವಿದ್ಯಾರ್ಥಿಗಳು, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಘೋಷಣೆ ಹಾಕಿದರು. ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಐಎಸ್‌ಎಫ್ ರಾಜ್ಯ ಸಂಚಾಲಕ ರಾಜೇಂದ್ರ ರಾಜವಾಳ, ವಿವಿಧ ತಾಲ್ಲೂಕುಗಳಿಂದ ನೂರಾರು ವಿದ್ಯಾರ್ಥಿಗಳು ಇಲ್ಲಿಗೆ ಐಟಿಐ ವಿದ್ಯಾಭ್ಯಾಸಕ್ಕೆ ಬರುತ್ತಾರೆ; ಆದರೆ ಅವರಿಗಾಗಿ ಒಂದೇ ಒಂದು ವಸತಿನಿಲಯವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.“ವಸತಿನಿಲಯ ಸೌಲಭ್ಯ ಇಲ್ಲದೇ ಎಷ್ಟೋ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ದೂರ ಉಳಿದಿದ್ದಾರೆ. ಇದನ್ನು ಗಮನಿಸಿಯಾದರೂ ಸರ್ಕಾರ ವಸತಿ ನಿಲಯ ಆರಂಭಿಸಬೇಕಿತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಅವರು ದೂರಿದರು.ಹೈದರಾಬಾದ್ ಕರ್ನಾಟಕದಲ್ಲಿ ಬಸಿಗೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಹೀಗಾಗಿ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಬಳಲುವಂತಾಗಿದೆ. ಇದನ್ನು ಗಮನಿಸಿ ಐಟಿಐ ಕಾಲೇಜಿಗೆ ಬೇಸಿಗೆ ರಜೆ ನೀಡಬೇಕು ಎಂದು ನಗರ ಸಂಚಾಲಕ ಅಲಿಸಾಬ ಎಂ. ಸಿಂದಗಿ ಒತ್ತಾಯಿಸಿದರು. ಸಂಘಟನೆಯ ಮುಖಂಡರಾದ ದೇವೇಂದ್ರ ರಾಜಾಪೂರ, ಮೌನೇಶ, ಭೀಮು, ರಾಕೇಶ, ಉದಯ, ನವರತ್ನ, ಭೀಮರಾಯ, ಲಕ್ಷ್ಮೀ ಅಷ್ಟಗಿ, ಗೀತಾ, ಬಾನು ಇತರರು ಇದ್ದರು.ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಪ್ರತಿಭಟನಾಕಾರರನ್ನು ಭೇಟಿ ಮಾಡಿ, ಮನವಿ ಸ್ವೀಕರಿಸಿದರು. ಒಂದು ವಾರದೊಳಗೆ ಬೇಡಿಕೆ ಈಡೇರದೇ ಹೋದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿ ಮುಖಂಡರು ಎಚ್ಚರಿಕೆ ನೀಡಿದರು..

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.