ಬುಧವಾರ, ಮೇ 18, 2022
27 °C

ಐ.ಟಿ. ದಾಳಿ: ಇಲಾಖೆಯ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ಕಾಲೇಜ್‌ಗಳನ್ನು ನಡೆಸುತ್ತಿರುವ ಕೆಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾತ್ರ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ತಪಾಸಣೆ ನಡೆಸಿದ್ದು, ಯಾವುದೇ ಧಾರ್ಮಿಕ ಸಂಸ್ಥೆ, ಮಠದ ವಿರುದ್ಧ ದಾಳಿ ನಡೆಸಿಲ್ಲ ಎಂದು  ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.ದಾಳಿಯು ಈ  ಶೈಕ್ಷಣಿಕ ಸಂಸ್ಥೆಗಳ ಚಟುವಟಿಕೆಗಳಿಗೆ ಮಾತ್ರ ಸಂಬಂಧಿಸಿತ್ತು. ಯಾವುದೇ ನಿರ್ದಿಷ್ಟ ಸಮುದಾಯ, ಧಾರ್ಮಿಕ ಸಂಸ್ಥೆ ಮತ್ತು ಮಠದ ವಿರುದ್ಧ ದಾಳಿ ನಡೆದಿಲ್ಲ ಎಂದು  ಕರ್ನಾಟಕ - ಗೋವಾ ವಲಯದ ಆದಾಯ ತೆರಿಗೆಯ (ತನಿಖೆ) ಮಹಾನಿರ್ದೇಶಕರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.