`ಐ.ಟಿ ದಾಳಿ ದುರುದ್ದೇಶಪೂರಿತ'

ಬುಧವಾರ, ಜೂಲೈ 17, 2019
30 °C

`ಐ.ಟಿ ದಾಳಿ ದುರುದ್ದೇಶಪೂರಿತ'

Published:
Updated:

ಬೆಂಗಳೂರು: `ಆದಿಚುಂಚನಗಿರಿ ಮಠದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದುರುದ್ದೇಶದಿಂದ ದಾಳಿ ನಡೆಸಿದ್ದಾರೆ. ಈ ದಾಳಿಯ ಹಿಂದೆ ಕಾಣದ ಕೈಗಳ ಕೈವಾಡ ಇದೆ' ಎಂದು ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಪತ್ರಿಕಾಹೇಳಿಕೆಯಲ್ಲಿ ಆರೋಪಿಸಿದ್ದಾರೆ.`ಮಠವು 2000 ವರ್ಷಗಳ ಇತಿಹಾಸ ಹೊಂದಿದೆ. ಸಂಸ್ಥೆಯು 450 ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಇಂತಹ ಮಠದ ಮೇಲೆ ತೆರಿಗೆ ದಾಳಿ ನಡೆಯಬಾರದಿತ್ತು. ಇದು ಸಮಾಜಕ್ಕೆ ಕೆಟ್ಟ ಸಂದೇಶವನ್ನು ನೀಡುತ್ತದೆ. ಭವಿಷ್ಯದಲ್ಲಿ ಒಂದು ಜನಾಂಗ ಹಾಗೂ ಮಠವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ಹೋರಾಟ ಮಾಡಲಾಗುವುದು' ಎಂದು ಎಚ್ಚರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry