ಗುರುವಾರ , ಮೇ 19, 2022
22 °C

ಐ.ಟಿ. ದಾಳಿ: ಮಹತ್ವದ ದಾಖಲೆ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐ.ಟಿ. ದಾಳಿ: ಮಹತ್ವದ ದಾಖಲೆ ವಶ

ಹೊಸಪೇಟೆ: ಹೊಸಪೇಟೆ, ಬೆಂಗಳೂರು ಮತ್ತು ಯಲ್ಲಾಪುರದ ಡ್ರೀಮ್ ಲಾಜಿಸ್ಟಿಕ್ ಕಂಪೆನಿ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ಏಕ ಕಾಲಕ್ಕೆ ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಯಲ್ಲಾಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿವೇಕ್ ಹೆಬ್ಬಾರ ಮಾಲೀಕತ್ವದ ಡ್ರೀಮ್ ಲಾಜಿಸ್ಟಿಕ್‌ನ ಪ್ರಧಾನ ಕಚೇರಿ ಉ.ಕ. ಜಿಲ್ಲೆಯ ಯಲ್ಲಾಪುರ, ಹೊಸಪೇಟೆ ಹಾಗೂ ಬೆಂಗಳೂರಿನ ಕಚೇರಿಗಳು, ಮತ್ತು ಬೆಂಗಳೂರಿನ ಡಿಎಲ್‌ಸಿ ಅತಿಥಿಗೃಹ ಮತ್ತು ಹೋಟೆಲ್ ಮತ್ತು ಕಂಪೆನಿ ಪಾಲುದಾರರಾದ ಪ್ರಕಾಶ ಹೆಗಡೆ ಮತ್ತು ಪ್ರಭು ಅವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.ಬೆಂಗಳೂರು ಆದಾಯ ತೆರಿಗೆ ಅಧಿಕಾರಿಗಳಾದ ಗುರುಪ್ರಸಾದ ಮತ್ತು ಮೇಘನಾಥ ಚವ್ಹಾಣ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಆರಂಭವಾಗಿರುವ ದಾಳಿಯಲ್ಲಿ ಇಲಾಖೆಯ 30ಕ್ಕೂ ಹೆಚ್ಚು ಅಧಿಕಾರಿಗಳು ಪಾಲ್ಗೊಂಡಿದ್ದಾರೆ.ಈ ಕಂಪೆನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕುವಂತೆ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಯಲ್ಲಾಪುರದಲ್ಲಿ ಕೇಂದ್ರ ಕಚೇರಿ ಹೊಂದಿದ್ದರೂ ಬಹುತೇಕ ವ್ಯವಹಾರಗಳ ಕೇಂದ್ರೀಕೃತವಾಗಿರುವ ಹೊಸಪೇಟೆಯ ಡ್ಯಾಂ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಹತ್ತಿರದ ಲಾಜಿಸ್ಟಿಕ್ ಕಂಪೆನಿಯ ಕಚೇರಿಯಲ್ಲಿಯೇ ಹೆಚ್ಚಿನ ಮಾಹಿತಿಗಳು ಲಭ್ಯವಾಗಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.