ಗುರುವಾರ , ಮೇ 19, 2022
20 °C

ಐಟಿ ದಾಳಿ: 12 ಕೋಟಿ ನಗದು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಈರೋಡ್ (ಪಿಟಿಐ): ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಶನಿವಾರ ಇಲ್ಲಿಗೆ ಸಮೀಪದ ಕಾಸಿಪಾಳ್ಯಂ ನಿವಾಸಿಯೊಬ್ಬರ ಮನೆಯಿಂದ ಸುಮಾರು 11.50 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಇದಕ್ಕೂ ಮುನ್ನ, ಕ್ಷಿಪ್ರ ಕಾರ್ಯಾಚರಣೆ ಪಡೆಯು ಬುಧವಾರ ಇಬ್ಬರು ವ್ಯಕ್ತಿಗಳಿಂದ ಲೆಕ್ಕಕ್ಕೆ ಸಿಗದ 50 ಲಕ್ಷ ರೂಪಾಯಿಯನ್ನು ವಶಪಡಿಸಿಕೊಂಡ ಮಾಹಿತಿಯನ್ನು ಜಿಲ್ಲಾಧಿಕಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ ನಂತರ ಈ ದಾಳಿ ನಡೆದಿದೆ.ತೆರಿಗೆ ವಂಚಕರಲ್ಲಿ ಒಬ್ಬಾತ ಮನೆ ಮಾಲೀಕ ಜೀವನ್‌ಧಾಮ್. ಈತ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾನೆ. ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಮಧ್ಯೆ, ಪೊಲೀಸರು ಕಳೆದ ರಾತ್ರಿ ಭವಾನಿಯಿಂದ ಕಾವಿಂದಪಾಡಿಗೆ ಹೋಗುತ್ತಿದ್ದ ಕಾರಿನಲ್ಲಿ  8.50 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.  ಕಾರಿನಲ್ಲಿದ್ದ ಮೂವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 13ರಂದು ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿ-ಸಂಹಿತೆ ಜಾರಿಯಲ್ಲಿದು, ಇದರಿಂದಾಗಿ   ಇಂತಹ ದಾಳಿಗಳನ್ನು ಕೈಗೊಳ್ಳ     ಲಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.